ರಾಜ್ಯದಲ್ಲಿ ಮೇ ಅಂತ್ಯದವರೆಗೆ ಒಟ್ಟು 3.37 ಕೋಟಿ ವಾಹನಗಳ ನೋಂದಣಿಯಾಗಿವೆ. ಅದರಲ್ಲಿ 1.24 ಕೋಟಿ ಬೆಂಗಳೂರು ನಗರದಲ್ಲಿಯೇ ಇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಸಾರಿಗೆ ಇಲಾಖೆಗೆ ವಾಹನ ತಪಾಸಣೆಗಾಗಿ 40 ಮಹಿಂದ್ರಾ ಬೊಲೆರೊ ವಾಹನಗಳನ್ನು ಬುಧವಾರ ಹಸ್ತಾಂತರ ಮಾಡಿ ಅವರು ಮಾತನಾಡಿದರು.
‘ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮೋಟಾರು ವಾಹನ ನಿರೀಕ್ಷಕರ ಸಂಖ್ಯೆಯೂ ಹೆಚ್ಚಳವಾಗಬೇಕು. ತಪಾಸಣೆಗಳೂ ಹೆಚ್ಚಾಗಬೇಕು. ಅದಕ್ಕಾಗಿ ಈಗಾಗಲೇ 129 ನಿರೀಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ’ ಎಂದು ವಿವರಿಸಿದರು.
ಸಾರಿಗೆ ಇಲಾಖೆಯಿಂದ ರಸ್ತೆ ಸುರಕ್ಷತೆ ಮತ್ತು ಪ್ರವರ್ತನ ಚಟುವಟಿಕೆಯನ್ನು ಚುರುಕುಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಚನೆಗಳನ್ನು ನೀಡಿವೆ. ಜನಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು ಎಂದು ತಿಳಿಸಿವೆ. ಅದಕ್ಕೆ ಅನುಗುಣವಾಗಿ ಕೆಲಸ ಮಾಡಲು ವಾಹನ ಖರೀದಿಸಲಾಗಿದೆ ಎಂದರು.
ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾಗಿರುವ ರಸ್ತೆ ಸುರಕ್ಷತಾ ಸಮಿತಿಯು ನೀಡಿರುವ ಸೂಚನೆಯಂತೆ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಸುರಕ್ಷತಾ ಮಾನದಂಡಗಳನ್ನು ಅಳವಡಿಸಿಕೊಳ್ಳದ ವಾಹನಗಳಿಗೆ ದಂಡ ಹಾಕಬೇಕು. ಚಾಲಕರು, ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾತ್ರಿ ಸಂಚಾರದ ವೇಳೆ ಟೈಲ್ ಲ್ಯಾಂಪ್, ಇಂಡಿಕೇಟರ್‌ಗಳು ಸುಸ್ಥಿತಿಯಲ್ಲಿ ಇವೆಯೇ ಎಂದು ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.
ಪೊಲೀಸ್, ಆರೋಗ್ಯ, ಲೋಕೋಪಯೋಗಿ, ಶಿಕ್ಷಣ ಇಲಾಖೆಯ ಸಹಯೋಗ ಪಡೆದುಕೊಂಡು ರಸ್ತೆ ಸುರಕ್ಷತಾ ಪ್ರಾಧಿಕಾರವು ಹೆಚ್ಚು ಅಪಘಾತ ಉಂಟಾಗುವ ಸ್ಥಳಗಳನ್ನು ಗುರುತಿಸಬೇಕು. ಅಪಘಾತ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು. ಹೆಲ್ಮಟ್ ಧರಿಸದೇ ದ್ವಿಚಕ್ರವಾಹನ ಚಾಲನೆ, ಮದ್ಯಪಾನ ಮಾಡಿ ವಾಹನ ಚಾಲನೆ, ಸೀಟ್ ಬೆಲ್ಟ್ ಧರಿಸದಿರುವುದು ಮುಂತಾದವುಗಳನ್ನು ನಿಯಂತ್ರಿಸಬೇಕು ಎಂದು ಹೇಳಿದರು.
ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ. ಯೋಗೀಶ್, ಹೆಚ್ಚುವರಿ ಆಯುಕ್ತರಾದ ಸಿ. ಮಲ್ಲಿಕಾರ್ಜುನ, ಉಮಾಶಂಕರ್ ಉಪಸ್ಥಿತರಿದ್ದರು.
ಅಂಕಿ ಅಂಶ:
- 15000 ಕೋಟಿ ಸಾರಿಗೆ ಇಲಾಖೆಯು 2025-26ನೇ ಸಾಲಿನಲ್ಲಿ ಸಂಗ್ರಹಿಸಬೇಕಾದ ರಾಜಸ್ವ 401595 2024-25ರಲ್ಲಿ ದಾಖಲಾದ ಸಾರಿಗೆ ನಿಯಮ ಉಲ್ಲಂಘನೆಯ ಪ್ರಕರಣಗಳು ₹197.5 ಕೋಟಿ 2024-25ರಲ್ಲಿ ವಸೂಲಿ ಮಾಡಲಾದ ದಂಡ
give good titles for this news
Post Comment