ಕರ್ನಾಟಕದ ಶಕ್ತಿ ಯೋಜನೆ ಹೊಸ ಮೈಲಿಗಲ್ಲು
ಬೆಂಗಳೂರು, ಜುಲೈ 7:
ಮಹಿಳಾ ಸಬಲೀಕರಣದ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಶಕ್ತಿ ಗ್ಯಾರೆಂಟಿ ಯೋಜನೆ ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಈ ಯೋಜನೆಯಡಿಯಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಶೀಘ್ರದಲ್ಲೇ 500 ಕೋಟಿ ತಲುಪಲಿದೆ.
ಜುಲೈ 14 ಅಥವಾ 15, 2025 ರಂದು ಈ ಐತಿಹಾಸಿಕ ಸಾಧನೆ ಸಾಧ್ಯವಿದೆ ಎಂದು ಅಂದಾಜಿಸಲಾಗಿದ್ದು, ಕರ್ನಾಟಕ ಸರಕಾರದ ಶಕ್ತಿ ಯೋಜನೆಯು ದೇಶದ ಸಾರಿಗೆ ಕ್ಷೇತ್ರದಲ್ಲಿ ಮಹಿಳೆಯರಿಗೆ ನೀಡಿದ ಅನನ್ಯ ಪ್ರೋತ್ಸಾಹಕ್ಕೆ ಸಾಕ್ಷಿಯಾಗಲಿದೆ.
ಈ ಯೋಜನೆಯ ಆರಂಭದಿಂದಲೇ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ, ಶಿಕ್ಷಣ, ಉದ್ಯೋಗ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಸಹಕಾರಿಯಾಗಿದೆ.
ಸಾರಿಗೆ ಇಲಾಖೆ ಹಾಗೂ ಸರ್ಕಾರ ಈ ಸಾಧನೆಯನ್ನು ಸಂಭ್ರಮಿಸಲು ಸಜ್ಜಾಗಿದ್ದು, ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇಡಲಾಗಿರುವ ಈ ದಿಟ್ಟ ಹೆಜ್ಜೆಯು ದೇಶಕ್ಕೆ ಮಾದರಿಯಾಗಿದೆ.
–VOICE OF KARNATAKA
Post Comment