ಬೆಂಗಳೂರು ಮೆಟ್ರೋ ಹಳದಿ ಮಾರ್ಗದಲ್ಲಿ ಸಾರ್ವಜನಿಕ ಸಾರಿಗೆ ಸಂಪರ್ಕವನ್ನು ಬಲಪಡಿಸುವ ಉದ್ದೇಶದಿಂದ ಪರಿಚಯಿಸಲಾದ ಹೊಸ ಮೆಟ್ರೋ ಫೀಡರ್ ಬಸ್ ಮಾರ್ಗಗಳ ಉದ್ಘಾಟನೆ 2025ರ ಆಗಸ್ಟ್ 12ರಂದು ನೆರವೇರಿತು.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಈ ಯೋಜನೆಗೆ ಲೋಕಾರ್ಪಣೆ ಮಾಡಿದರು. ಬಳಿಕ ಹಳದಿ ಮಾರ್ಗದ ಮೆಟ್ರೋದಲ್ಲಿ ಸಚಿವರು ಪ್ರಯಾಣಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ ಆರ್ (ಭಾ.ಆ.ಸೇ), ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಎಂ. ಕೃಷ್ಣಪ್ಪ, ಮಾಹಿತಿ ತಂತ್ರಜ್ಞಾನ ನಿರ್ದೇಶಕಿ ಶಿಲ್ಪ ಎಂ. (ಭಾ.ಆ.ಸೇ), ಭದ್ರತೆ ಮತ್ತು ಜಾಗೃತ ನಿರ್ದೇಶಕರಾದ ಅಬ್ದುಲ್ ಅಹದ್ (ಭಾ.ಪೋ.ಸೇ), ಎಲೆಕ್ಟ್ರಾನಿಕ್ ಸಿಟಿ ಇಂಡಸ್ಟ್ರಿಯಲ್ ಅಸೋಸಿಯೇಷನ್ (ELCIA) ಮತ್ತು ಎಲೆಕ್ಟ್ರಾನಿಕ್ ಸಿಟಿ ಇಂಡಸ್ಟ್ರಿಯಲ್ ಟೌನ್‌ಶಿಪ್ ಅಸೋಸಿಯೇಷನ್ (ELCITA) ಅಧಿಕಾರಿಗಳು ಹಾಗೂ ಸಂಸ್ಥೆಯ ಹಲವಾರು ಸಿಬ್ಬಂದಿವರ್ಗದವರು ಭಾಗವಹಿಸಿದ್ದರು.

ಹೊಸ ಫೀಡರ್ ಬಸ್ ಮಾರ್ಗಗಳು ಮೆಟ್ರೋ ನಿಲ್ದಾಣಗಳಿಂದ ಸಮೀಪದ ಕೈಗಾರಿಕಾ, ವಾಣಿಜ್ಯ ಮತ್ತು ವಸತಿ ಪ್ರದೇಶಗಳಿಗೆ ಸುಗಮ ಹಾಗೂ ವೇಗದ ಸಂಪರ್ಕ ಕಲ್ಪಿಸುವಲ್ಲಿ ಮಹತ್ವದ ಪಾತ್ರವಹಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Post Comment