ಗೌರಿ ಗಣೇಶ ಹಬ್ಬದ ಪ್ರಯುಕ್ತ ‘ಗಂಗೆ ಗೌರಿ’ ಚಿತ್ರದ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಡುಚಿ ಕ್ಷೇತ್ರದ ಮಾಜಿ ಶಾಸಕ ಪಿ. ರಾಜೀವ್, ಬಂಜಾರ ಸಂಸ್ಕ್ರತಿ ಹಾಗೂ ಭಾಷಾ ಆಕಾಡೆಮಿ ಅಧ್ಯಕ್ಷ ಡಾ.ಎ.ಆರ್. ಗೋವಿಂದಸ್ವಾಮಿ, ಪ್ರಿಯಾ ಹಾಸನ್ ಮತ್ತು ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ‍್ಕೆ ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.
ಈ ಚಿತ್ರದಲ್ಲಿ ಹಿರಿಯ ನಟ ಗಣೇಶ್ ರಾವ್ ಕೇಸರ್‌ಕರ್ ಶಿವನಾಗಿ ಕಾಣಿಸಿಕೊಂಡಿದ್ದು, ಇದು ಅವರ 350ನೇ ಚಿತ್ರ ಎಂಬುದು ವಿಶೇಷ. ನಟನೆ ಜೊತೆಗೆ ಜಿ.ಆರ್.ಫಿಲಂಸ್ ಅಡಿಯಲ್ಲಿ ಎರಡನೇ ಕಾಣಿಕೆಯಾಗಿ ನಿರ್ಮಾಣ ಮಾಡಿದ್ದಾರೆ.
ಬಿ.ಎ. ಪುರುಷೋತ್ತಮ್ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ. ರಂಗಭೂಮಿ ನಟಿ ರಾಣೆಬೆನ್ನೂರಿನ ರೂಪಾಲಿ ಮೂರು ಶೇಡ್‌ಗಳಲ್ಲಿ ಅಂದರೆ ಗೌರಿ, ಪಾರ್ವತಿ, ದಾಕ್ಷಾಯಿಣಿ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಗಂಗೆಯಾಗಿ ನಿಖಿತಾ ಸ್ವಾಮಿ ನಟಿಸಿದ್ದಾರೆ. ಮಿಕ್ಕಂತೆ ಜಯಸಿಂಹ ಮುಸೂರಿ, ಎಸ್ಕಾರ್ಟ್ ಶ್ರೀನಿವಾಸ್, ಜಿಮ್ ಶಿವು ಮುಂತಾದವರು ನಟಿಸಿದ್ದಾರೆ. ರಾಜ್‌ಭಾಸ್ಕರ್ ಸಂಗೀತ, ಗೌರಿ ವೆಂಕಟೇಶ್ ಛಾಯಾಗ್ರಹಣ ಈ ಚಿತ್ರಕ್ಕಿದೆ.
Post Comment