ಆಳಂದ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಆಳಂದ ಪಟ್ಟಣದಲ್ಲಿ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನಾ ಕಾರ್ಯಕ್ರಮ ಶನಿವಾರ ನೆರವೇರಿತು.
ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ 36 ಮಂದಿ ಮೃತಪಟ್ಟ ಸಿಬ್ಬಂದಿಗಳ ಅವಲಂಬಿತರಿಗೆ ಅನುಕಂಪ ಆಧಾರದ ಹುದ್ದೆಗಳ ನೇಮಕಾತಿ ಆದೇಶಗಳನ್ನು ವಿತರಿಸಲಾಯಿತು.
ಅದೇ ರೀತಿ ಬಸ್ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಪ್ರಯಾಣಿಕರ ಕುಟುಂಬಗಳಿಗೆ ತಲಾ ರೂ.10 ಲಕ್ಷಗಳ ಚೆಕ್ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯ ಸಾಗರ್ ಖಂಡ್ರೆ, ಶಾಸಕರಾದ ಬಿಆರ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ವ್ಯವಸ್ಥಾಪಕ ನಿರ್ದೇಶಕಿ ಬಿ. ಸುಶೀಲಾ, ವಿಭಾಗೀಯ ನಿಯಂತ್ರಣಾಧಿಕಾರಿ ಸುನಿಲಕುಮಾರ್ ಚಂದರಗಿ ಸೇರಿದಂತೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ ಗಣ್ಯರು ಭಾಗಿಯಾಗಿದ್ದರು.
Post Comment