×

ಎನ್‌ಎಫ್‌ಐಆರ್‌ಟಿಡಬ್ಲ್ಯು, 18ನೇ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಎನ್‌ಎಫ್‌ಐಆರ್‌ಟಿಡಬ್ಲ್ಯು, 18ನೇ ರಾಷ್ಟ್ರೀಯ ಸಮ್ಮೇಳನವನ್ನು ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿದರು.

ರಾಜ್ಯದಲ್ಲಿ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿರುವ ‘ಶಕ್ತಿ’ ಯೋಜನೆ ದೇಶದ ಎಲ್ಲ ರಾಜ್ಯ- ಗಳಲ್ಲಿಯೂ ಜಾರಿಗೆ ಬರಬೇಕು. ಅದಕ್ಕಾಗಿ ಸಾರಿಗೆ ನೌಕರರ ರಾಷ್ಟ್ರೀಯ ಸಂಘಟನೆ ಆಯಾ ರಾಜ್ಯಗಳಲ್ಲಿ ಹೋರಾಟ ನಡೆಸಲಿದೆ. ಎಲ್ಲಾ ರಾಜ್ಯಗಳಿಗೂ ಶಕ್ತಿ ಬರಲಿ ಎಂದು ಎನ್‌- ಫ್‌ಐಆರ್‌ಟಡಬ್ಬು ಅಧ್ಯಕ್ಷ ಎಚ್‌.ವಿ. ಅನಂತ ಸುಬ್ಬರಾವ್‌ ತಿಳಿಸಿದರು.

ನ್ಯಾಷನಲ್ ಫೆಡರೇಷನ್ ‌ ಆಫ್ ‌ ಇಂಡಿಯನ್ ರೋಡ್ ಟ್ರಾನ್ಸ್‌ಪೋರ್ಟ್ ವರ್ಕಸ್್ರ (ಎನ್‌ಎಫ್‌ಐಆ‌ರಟಡ ಬ್ರು) 18ನೇ ರಾಷ್ಟ್ರೀಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ನಾಲ್ಕು ನಿಗಮಗಳ ಬಸ್‌ಗಳಲ್ಲಿ ನಿತ್ಯ ಸರಾಸರಿ 625 ಲಕ್ಷ ಮಹಿಳೆಯರು ಸಂಚರಿಸುತ್ತಿದ್ದಾರೆ. ಕರ್ನಾಟಕದಲ್ಲಿ ಯಶಸ್ವಿಯಾದ ಯೋಜನೆಯನ್ನು ಬೇರೆ ರಾಜ್ಯಗಳಲ್ಲಿ ಏಕೆ ಅನುಷ್ಠಾನಗೊಳಿಸಬಾರದು ಎಂದು ಪ್ರಶ್ನಿಸಿದರು.

ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸೈನಿಕರು ಮೃತಪಟ್ಟರೂ 60 ಲಕ್ಷ ಮಾತ್ರ ಸಿಗುತ್ತದೆ. ನಮ್ಮ ಸಾರಿಗೆ ನಿಗಮಗಳ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿವಿಮೆ ಸಿಗುವಂತೆ ಮಾಡಿದ್ದೇವೆ. ಅಪಘಾತವಲ್ಲದ ಕಾರಣಕ್ಕೆ ಮೃತಪಟ್ಟರೆ ರೂ. 10 ಲಕ್ಷ . ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ನೌಕರರ ಹೃದಯ ತಪಾಸಣೆ, ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಾರಿಗೆ ನಿಗಮಗಳ ಬಸ್ಸುಗಳು ದಿನಕ್ಕೆ 1.65 ಲಕ್ಷ ಟ್ರಿಪ್ ಮಾಡುತ್ತವೆ. ವಿರೋಧ ಪಕ್ಷದವರು ಅಧಿಕಾರದಲ್ಲಿ ಇರುವಾಗ ಹೊಸ ಬಸ್ ಖರೀದಿ ಮಾಡಲಿಲ್ಲ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿಲ್ಲ ಎಂದು ಟೀಕಿಸಿದರು.

ನಿಗಮದ ನೌಕರರ ಬೇಡಿಕೆಗಳನ್ನು
ಈಡೇರಿಸಲಾಗುವುದು. ಅಲ್ಲದೇ ವಾಣಿಜ್ಯ ಸಾರಿಗೆ ನಡೆಸುವ ಟ್ಯಾಕ್ಸಿ, ಆಟೊ ಸಹಿತ ಖಾಸಗಿ ವಾಹನಗಳ ನೌಕರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು.

%voice of karnataka % top kannada news

ನಿಗಮಗಳ ಖಾಸಗೀಕರಣಕ್ಕೆ ಕೇಂದ್ರ ಯತ್ನ

“ಎಲೆಕ್ಟಿಕ್ ಬಸ್‌ಗೆ ಗೆ 2 ಕೋಟಿ ಇದೆ. ಫೇಮ್ ಯೋಜನೆ ರೂಪಿಸಿರುವ ಕೇಂದ್ರ ಸರ್ಕಾರವು ಈ ಬಸ್‌ಗಳ ಖರೀದಿಗೆ 45 ಲಕ್ಷ ಸಹಾಯಧನ ನೀಡುತ್ತಿದೆ. ಆದರೆ, ಈ ಸಹಾಯಧನವನ್ನು ನಿಗಮಗಳಿಗೆ ನೀಡದೇ ಖಾಸಗಿಯವರಿಗೆ ಮಾತ್ರ ನೀಡುವ ಮೂಲಕ ಖಾಸಗೀಕರಣಕ್ಕೆ ಮುಂದಾಗಿದೆ’ ಎಂದು ಎಚ್.ವಿ.ಅನಂತ ಸುಬ್ಬರಾವ್ ಆರೋಪಿಸಿದರು.

‘ಲಕ್ಷಾಂತರ ಜನರಿಗೆ ಸಾರಿಗೆ ನಿಗಮಗಳು ಉದ್ಯೋಗ ನೀಡಿವೆ. ಕಾರ್ಮಿಕರ ಹಿತವನ್ನು ಕಾಪಾಡಿಕೊಂಡು ಬಂದಿವೆ. ಅವುಗಳನ್ನು ಖಾಸಗೀಕರಣಗೊಳಿಸಲು ರಸ್ತೆ ಸಾರಿಗೆ ಸುರಕ್ಷತಾ ಮಸೂದೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014ರಲ್ಲಿಯೇ ರೂಪಿಸಿತ್ತು. ಹೋರಾಟದ ಮೂಲಕ ಆಗ ಹಿಮ್ಮೆಟ್ಟಿಸಿದ್ದೆವು. ಈಗ ಫೇಮ್ ಯೋಜನೆಯ ಮೂಲಕ ಬೇರೆ ದಾರಿಯಲ್ಲಿ ಖಾಸಗೀಕರಣಕ್ಕೆ ಮುಂದಾಗಿದೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು’ ಎಂದರು.

ಎನ್‌ಎಫ್‌ಐಆರ್‌ಟಿಡಬ್ಲ್ಯು, 18ನೇ ರಾಷ್ಟ್ರೀಯ ಬಹಿರಂಗ ಸಮಾವೇಶದಲ್ಲಿ ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ಸರ್ಕರ್ಸ್ ಫೆಡರೇಷನ್‌ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಡಿ.ಎ. ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಅಮರಜೀತ್‌ ಕೌ‌ರ್, ಎನ್‌ಎಫ್‌ಐಆರ್‌ಟಿಡಬ್ಲ್ಯು, ಉಪಾಧ್ಯಕ್ಷ ಎಂ.ಎಲ್.ಯಾದವ್‌ ಭಾಗವಹಿಸಿದ್ದರು.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed