ಬೆಂಗಳೂರು: ಮಹದೇವಪುರ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ ಎಂಬ ಆರೋಪದ ಮೇಲೆ ಕರ್ನಾಟಕ ಪ್ರದೇಶ ಯುವ ಜನತಾದಳ ನಾಯಕರು ಇಂದು ಜಿಬಿಎ (ಗ್ರೇಟರ್ ಬೆಂಗಳೂರು ಅಥಾರಿಟಿ) ಮಹದೇವಪುರ ಕಚೇರಿ ಮುಂಭಾಗದಲ್ಲಿ ಕಸ ಸುರಿದು ತೀವ್ರ ಪ್ರತಿಭಟನೆ ನಡೆಸಿದರು.
ಜೆಡಿಎಸ್ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಆದಿತ್ಯ ಎನ್. ರಾಜ್ ಹಾಗೂ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ತರಿಕೆರೆ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸ್ಥಳೀಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಸಾಮಾನ್ಯ ಜನರ ಮನೆಮನೆಗಳಿಂದ ಕಸ ವಿಲೇವಾರಿ ನಿರ್ವಹಣೆ ಮಾಡುವಲ್ಲಿ ಅಧಿಕಾರಿಗಳು ಸಿಬ್ಬಂದಿ ವಿಫಲರಾಗಿದ್ದಾರೆ.
ರಸ್ತೆಗೆಸೆಯಲ್ಪಟ್ಟ ಕಸದ ರಾಶಿಗಳು ದುರ್ವಾಸನೆ ಹಾಗೂ ಜನಾರೋಗ್ಯಕ್ಕೆ ಅಪಾಯ ಉಂಟುಮಾಡುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಬಿಎ ಅಧಿಕಾರಿಗಳಿಗೆ ಯುವ ಜನತಾದಳ ಒತ್ತಾಯ ವ್ಯಕ್ತಪಡಿಸಿದೆ.



Post Comment