ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರತಿಷ್ಠಿತ ‘ಕರ್ನಾಟಕದ ಹೆಮ್ಮೆ (ಪ್ರೈಡ್ ಆಫ್ ಕರ್ನಾಟಕ)’ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಗರದ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್, ಸಚಿವರಾದ ರಾಮಲಿಂಗಾ ರೆಡ್ಡಿ, ಮಧು ಬಂಗಾರಪ್ಪ, ರಹೀಂ ಖಾನ್ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಾರ್ವಜನಿಕ ಸೇವೆ, ಸಾಮಾಜಿಕ ಬದ್ಧತೆ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಮಹತ್ವದ ಕೊಡುಗೆಗಾಗಿ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಈ ಗೌರವ ಪ್ರದಾನ ಮಾಡಲಾಗಿದೆ.




Post Comment