×

ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ಮಟ್ಟದ ಗೌರವ; Governance Now 12th (PSU) ಪ್ರಶಸ್ತಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಗೆ Governance Now 12th (PSU) ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, Excellence in Innovation ವಿಭಾಗದಲ್ಲಿ ನಿಗಮದ “ಧ್ವನಿಸ್ಪಂದನ” ಉಪಕ್ರಮಕ್ಕೆ ಈ ಪ್ರತಿಷ್ಠಿತ ಗೌರವ ದೊರೆತಿದೆ.

ಕೆಎಸ್‌ಆರ್‌ಟಿಸಿ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ “ಧ್ವನಿಸ್ಪಂದನ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್” ಯೋಜನೆಯನ್ನು ಜರ್ಮನಿಯ GiZ ಸಂಸ್ಥೆಯ ಸಹಯೋಗದಲ್ಲಿ ಯಶಸ್ವಿಯಾಗಿ ಜಾರಿಗೆ ತಂದಿದೆ.

ಈ ವ್ಯವಸ್ಥೆಯ ಮೂಲಕ ದೃಷ್ಟಿ ವಿಕಲಚೇತನ ಪ್ರಯಾಣಿಕರಿಗೆ ಬಸ್ ಗುರುತಿಸುವಿಕೆ ಮತ್ತು ಪ್ರಯಾಣ ಮಾರ್ಗದ ಮಾಹಿತಿ ಧ್ವನಿ ಮೂಲಕ ದೊರೆಯುತ್ತಿದ್ದು, ಅವರ ಪ್ರಯಾಣದ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದ ಅವರ ಆತ್ಮವಿಶ್ವಾಸ, ಭದ್ರತೆ ಹಾಗೂ ಸಂಚಾರದ ಸ್ವಾತಂತ್ರ್ಯದಲ್ಲಿ ಮಹತ್ತರ ಬದಲಾವಣೆ ಕಂಡುಬಂದಿದೆ.

Governance Now ಸಂಸ್ಥೆಯವರು ಮಾರ್ಚ್ 11, 2026 ರಂದು ನವದೆಹಲಿ ನೆಹರು ಪ್ಲೇಸ್‌ನ Hotel Eros ನಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ದೇಶಕರು (ಸಿ ಮತ್ತು ಜಾ) ಗಾಯಿತ್ರಿ ಕೆ.ಎಂ. ಅವರು ವ್ಯವಸ್ಥಾಪಕ ನಿರ್ದೇಶಕ ಕೈಲಾಶ್ ಅಧಿಕಾರಿ ಹಾಗೂ ಅಮಿತ್ ಸಾದ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed