ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 195 ಅಧಿಕೃತ ಭೇಟಿಗಳು; ಜನಪರ ಆಡಳಿತಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ
ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವರಾಗಿದ್ದ ಅವಧಿಯಲ್ಲಿ ರಾಮಲಿಂಗಾ ರೆಡ್ಡಿ ಅವರು ತಮ್ಮ ದಕ್ಷ ಆಡಳಿತ ಹಾಗೂ ಜನಸ್ನೇಹಿ ಕಾರ್ಯವೈಖರಿಯಿಂದ ಮತ್ತೊಮ್ಮೆ ಗಮನ ಸೆಳೆದಿದ್ದಾರೆ.
ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ 20.05.2023ರಿಂದ 22.05.2026ರವರೆಗೆ ಒಟ್ಟು 54 ಬಾರಿ ಜಿಲ್ಲೆಗೆ ಅಧಿಕೃತ ಭೇಟಿ ನೀಡಿ ಸಭೆಗಳು, ಸಮಾರಂಭಗಳು, ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
ಇದರ ಜೊತೆಗೆ ಇದೇ ಅವಧಿಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 141 ಬಾರಿ ಅಧಿಕೃತ ಪ್ರವಾಸ ಕೈಗೊಂಡಿದ್ದಾರೆ. ಈ ಮೂಲಕ ಮೂರು ವರ್ಷಗಳ ಅವಧಿಯಲ್ಲಿ ಒಟ್ಟು 195 ಅಧಿಕೃತ ಪ್ರವಾಸಗಳನ್ನು ನಡೆಸಿರುವುದು ವಿಶೇಷವಾಗಿದೆ.
ರಾಜ್ಯದ ವಿವಿಧ ಭಾಗಗಳಿಗೆ ನಿರಂತರ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವುದು, ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲಿಸುವುದು ಹಾಗೂ ಆಡಳಿತ ಯಂತ್ರದೊಂದಿಗೆ ಸಮನ್ವಯ ಸಾಧಿಸುವಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮುಂಚೂಣಿಯಲ್ಲಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಇದಲ್ಲದೆ, ಬೆಂಗಳೂರಿನಲ್ಲಿ ಇರುವ ದಿನಗಳಲ್ಲಿ ಪ್ರತಿದಿನ ಬೆಳಿಗ್ಗೆ 8.30 ಗಂಟೆಗೆ ಬಿ.ಟಿ.ಎಂ. ಕ್ಷೇತ್ರದ ಕಚೇರಿಗೆ ಹಾಜರಾಗಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸುವ ಮೂಲಕ ಜನರಿಗೆ ಸುಲಭವಾಗಿ ಸಿಗುವ ಸಚಿವರಾಗಿ ಗುರುತಿಸಿಕೊಂಡಿದ್ದಾರೆ.
ಉಸ್ತುವಾರಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ನಿರಂತರ ಪ್ರವಾಸ, ಅಭಿವೃದ್ಧಿ ಕಾರ್ಯಗಳ ಮೇಲಿನ ನಿಗಾ ಮತ್ತು ಜನಸಂಪರ್ಕದ ಮೂಲಕ ಸಚಿವರು ಮಾದರಿ ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.



Post Comment