ಬೆಂಗಳೂರು, ಜೂನ್ 20:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ. ಬಿ., ಭಾ.ಆ.ಸೇ., ಅವರು ಇಂದು ಅಧಿಕಾರ ವಹಿಸಿಕೊಂಡರು. ಈ ಹಿಂದೆ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವ್ಯವಸ್ಥಾಪಕ ನಿರ್ದೇಶಕರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಸಮವರ್ತಿತ ಪ್ರಭಾರದಲ್ಲಿದ್ದ ಡಾ. ಸೆಲ್ವಮಣಿ ಆರ್., ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆ, ಅವರು ಅಧಿಕಾರವನ್ನು ಅಧಿಕೃತವಾಗಿ ಹಸ್ತಾಂತರಿಸಿ, ನೂತನ ವ್ಯವಸ್ಥಾಪಕ ನಿರ್ದೇಶಕರಿಗೆ ಶುಭಾಶಯಗಳನ್ನು ಕೋರಿದರು.



Post Comment