×

ಚಂದಾಪುರ ಕೆರೆ ಮಾಲಿನ್ಯ: ಕಠಿಣ ಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು, ಸೆಪ್ಟೆಂಬರ್ 30: ಆನೇಕಲ್ ತಾಲೂಕಿನ ಚಂದಾಪುರ ಹಾಗೂ ಸುತ್ತಮುತ್ತಲಿನ ಕೆರೆಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಮಾಲಿನ್ಯ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಿವಣ್ಣ ಸೇರಿದಂತೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಚಂದಾಪುರ, ರಾಮಕೃಷ್ಣಾಪುರ, ಹೆನ್ನಾಗರ, ಹೀಲಲಿಗೆ ಮತ್ತು ಮುತ್ತಾನಲ್ಲೂರು ಕೆರೆಗಳಿಗೆ ಭೇಟಿ ನೀಡಿದ ಸಚಿವರು, ಎಲೆಕ್ಟ್ರಾನಿಕ್ ಸಿಟಿ, ಜಿಗಣಿ, ಬೊಮ್ಮಸಂದ್ರ ಹಾಗೂ ಅತ್ತಿಬೆಲೆ ಕೈಗಾರಿಕಾ ಪ್ರದೇಶಗಳಿಂದ ಸಂಸ್ಕರಿಸದ ಕೈಗಾರಿಕಾ ತ್ಯಾಜ್ಯ ನೀರು ಮತ್ತು ವಸತಿ ಪ್ರದೇಶಗಳ ಒಳಚರಂಡಿ ನೀರು ಜಲಮೂಲಗಳಿಗೆ ಸೇರುತ್ತಿರುವ ಕುರಿತು ಮಾಹಿತಿ ಪಡೆದರು.

ಯಾವುದೇ ಕಾರಣಕ್ಕೂ ಸಂಸ್ಕರಿಸದ ಕೈಗಾರಿಕಾ ತ್ಯಾಜ್ಯ ಅಥವಾ ಒಳಚರಂಡಿ ನೀರು ಕೆರೆ, ಹಳ್ಳ ಹಾಗೂ ನೈಸರ್ಗಿಕ ಜಲಮೂಲಗಳಿಗೆ ಸೇರುವಂತಿಲ್ಲ. NGT ನಿರ್ದೇಶನಗಳು ಮತ್ತು ಪರಿಸರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ನಿಯಮ ಉಲ್ಲಂಘಿಸುವ ಕೈಗಾರಿಕೆಗಳು ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತ್ಯಾಜ್ಯ ನೀರಿನ ಸಂಸ್ಕರಣೆಗಾಗಿ ನಿರ್ಮಿಸಲಾಗುತ್ತಿರುವ ನಾಲ್ಕು ಪ್ರಮುಖ ನೀರು ಸಂಸ್ಕರಣಾ ಘಟಕಗಳ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಕಾರ್ಯಾಚರಣೆಗೆ ತರಲು ಸಮಯಬದ್ಧ ಕಾರ್ಯಯೋಜನೆ ರೂಪಿಸುವಂತೆ ನಗರಸಭೆ ಹಾಗೂ KSPCB ಅಧಿಕಾರಿಗಳಿಗೆ ಸೂಚಿಸಿದರು.

ಎಲೆಕ್ಟ್ರಾನಿಕ್ ಸಿಟಿ, ಬೊಮ್ಮಸಂದ್ರ, ಜಿಗಣಿ ಹಾಗೂ ಅತ್ತಿಬೆಲೆ ಪ್ರದೇಶಗಳಲ್ಲಿ ಕೈಗಾರಿಕಾ ತ್ಯಾಜ್ಯ ನೀರು ಹೊರಹಾಕುವ ಸ್ಥಳಗಳ ಮೇಲೆ ನಿರಂತರ ನಿಗಾ ವಹಿಸಲು KSPCB ವತಿಯಿಂದ ವಿಶೇಷ ಮೇಲ್ವಿಚಾರಣಾ ತಂಡಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

“ಕೆರೆಗಳು ಮತ್ತು ಜಲಮೂಲಗಳು ಪರಿಸರದ ಜೊತೆಗೆ ಸ್ಥಳೀಯ ಜನರ ಜೀವನ ಮತ್ತು ಆರೋಗ್ಯಕ್ಕೂ ಅತ್ಯಂತ ಮುಖ್ಯ. ತ್ಯಾಜ್ಯ ನೀರನ್ನು ಸಮರ್ಪಕವಾಗಿ ಸಂಸ್ಕರಿಸಿದ ನಂತರವೇ ಹೊರಹಾಕಬೇಕು. ಪರಿಸರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಕೆರೆಗಳ ಮಾಲಿನ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿದರು. ಮಾಲಿನ್ಯಕ್ಕೊಳಗಾದ ಕೆರೆಗಳ ಪುನರುಜ್ಜೀವನ ಹಾಗೂ ಮುಂದಿನ ದಿನಗಳಲ್ಲಿ ಮಾಲಿನ್ಯ ತಡೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಆರ್. ಕೆ. ರಮೇಶ್, ಆರ್. ಗೋಕೂಲ್ IFS, ಶ್ರೀನಿವಾಸುಲು IFS, ಕ್ಯಾಪ್ಟನ್ ಸಂತೋಷ್ KAS, ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Previous post

ಭೀಮಾ ನದಿಗೆ ಕಲುಷಿತ ತ್ಯಾಜ್ಯ ನೀರು: ತಪ್ಪಿತಸ್ಥ ಕೈಗಾರಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

Next post

ಮೈಸೂರು ಗ್ರಾಮಾಂತರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಬೀರಿಹುಂಡಿ ಬಸವಣ್ಣ ಅಧಿಕಾರ ಸ್ವೀಕಾರ

Post Comment

You May Have Missed