×

ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಗಳನ್ನು ಪರಿಶೀಲನೆ ನಡೆಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ಐರಾವತ ಕ್ಲಬ್ ಕ್ಲಾಸ್ 2.0
ನೂತನ ವೋಲ್ವೋ (9600 ಮಾದರಿ)ಯ ಬಸ್ ಗಳನ್ನು ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಬಸ್ ನ ಪರಿವೀಕ್ಷಣೆ ನಡೆಸಿದರು.

ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ 20 ಬಸ್ಸುಗಳನ್ನು ಕೆ ಎಸ್ ಆರ್ ಟಿ ಸಿ ಯು ಈ ತಿಂಗಳ ಕೊನೆಯ ವಾರದಲ್ಲಿ ತನ್ನ ವಾಹನಗಳ ಸಮೂಹಕ್ಕೆ ಸೇರ್ಪಡೆ ಗೊಳಿಸಲಿದೆ.

ಒಂದು ಬಸ್ಸಿನ ದರ ರೂ.1.78 ಕೋಟಿಗಳು. ನಿಗಮದಲ್ಲಿ ಒಟ್ಟು 443 ಬಸ್ಸುಗಳು ಐಷಾರಾಮಿ ಬಸ್ಸುಗಳಿವೆ.

ಕೆಎಸ್ಸಾರ್ಟಿಸಿ ಅಧ್ಯಕ್ಷರಾದ ಎಸ್ ಆರ್ ಶ್ರೀನಿವಾಸ್ (ವಾಸು), ಉಪಾಧ್ಯಕ್ಷರು ಮೊಹಮ್ಮದ್ ರಿಜ್ವಾನ್ ನವಾಬ್ ಮತ್ತು ವ್ಯವಸ್ಥಾಪಕ ನಿರ್ದೇಶಕರು ವಿ.ಅನ್ಬುಕುಮಾರ್ ಅವರು ಪರಿಶೀಲನೆ ನಡೆಸಿದರು.

%voice of karnataka % top kannada news

ಈ ಬಸ್ಸಿನ ವಿಶೇಷತೆಗಳು:
*ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ ತಣಿಸುವ ಸೌಂದರ್ಯ.

*ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ.

*ನವೀನ ತಂತ್ರಜ್ಙಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್ ನೀಡುತ್ತದೆ.

*ಒಟ್ಟಾರೆ ಬಸ್ಸಿನ ಉದ್ದದಲ್ಲಿ 3.5% ಹೆಚ್ಚಳ ಇರುವುದರಿಂದ ಸಲೂನ್‌ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಹೆಚ್ಚಾಗಿದೆ.

*ಒಟ್ಟಾರೆ ಬಸ್ಸಿನ ಎತ್ತರದಲ್ಲಿ 5.6% ಹೆಚ್ಚಳ ಇರುವುದರಿಂದ ಹೆಚ್ಚಿನ ಹೆಡ್‌ ರೂಂ ಇರುತ್ತದೆ.

*ವಿಂಡ್‌ಶೀಲ್ಡ್ ಗಾಜು 9.5% ರಷ್ಟು ವಿಸ್ತಾರವಾಗಿದ್ದು, ಚಾಲಕನಿಗೆ ಗೋಚರತೆಯನ್ನು ಹೆಚ್ಚಿಸಿ ಬ್ಲೈಂಡ್ ಸ್ಪಾಟ್ ಅನ್ನು ಕಡಿಮೆ ಮಾಡುತ್ತದೆ.

*ವಿಶಾಲ ಲಗೇಜ್ ಸ್ಥಳಾವಕಾಶವಿದ್ದು , ಹಿಂದಿನ ಬಸ್ ಗಳಿಗೆ ಹೋಲಿಸಿದ್ದಲ್ಲಿ ಶೇ 20% ರಷ್ಟು ಹೆಚ್ಚಿನ ಲಗ್ಗೇಜ್ ಇಡುವ ಸೌಲಭ್ಯವಿರುತ್ತದೆ. ಇದು ಅತ್ಯಂತ ಲಗೇಜ್ ಸ್ಥಳಾವಕಾಶವಿರುವ ಮೊದಲ ಬಸ್ ಆಗಿದೆ‌.

*USB + C ಟೈಪ್ ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಒಳಗೊಂಡಿದೆ.

*ವಿಶಾಲವಾದ ಎಸಿ ಡಕ್ಟ್ ಹೊಂದಿರುವುದರಿಂದ ವಾಹನದ ಒಳಗೆ ಉತ್ತಮ ಹವಾನಿಯಂತ್ರಣಾ ವ್ಯವಸ್ಥೆ ಇರುತ್ತದೆ.

*ಉನ್ನತ ದರ್ಜೆ/ ವಿನ್ಯಾಸದ ಆಸನಗಳು ಮತ್ತು ಸಾಮಗ್ರಿಗಳ ಬಳಕೆಯಿಂದ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಸೌಕರ್ಯ.

*ವಿಶಾಲವಾದ ಪ್ಯಾಂಟೋಗ್ರಾಫಿಕ್ ವಿನ್ಯಾಸದಿಂದ ವಾಹನದ ನಿರ್ವಹಣೆ ಕೈಗೊಳ್ಳಲು ಸುಲಭವಾಗಿರುತ್ತದೆ.

*ಹಿಂಭಾಗದಲ್ಲಿ fog light ಅನ್ನು ಒಳಗೊಂಡಿರುವುದಿರಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ ಇರುತ್ತದೆ.

*ಸುಲಭವಾಗಿ ಕೈಗೆಟುಕುವ ಚಾಲಕ ನಿಯಂತ್ರಣಗಳು ಮತ್ತು ಸ್ವಿಚ್‌ಗಳನ್ನು ಹೊಂದಿದ್ದು ಚಾಲಕರಿಗೆ ಹೆಚ್ಚು ಅನುಕೂಲಕರವಾಗಿರುತ್ತದೆ.

*ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಅಳವಡಿಸಿದ್ದು ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ. ಬಸ್ಸಿನ ಒಳಗೆ ಪ್ರಯಾಣಿಕರ ಆಸನದ ಎರಡೂ ಬದಿಯಲ್ಲಿ ನೀರಿನ ಪೈಪುಗಳಿದ್ದು 30 ನಾಜ಼ಲ್ ಗಳಿಂದ ನೀರು ಸರಬರಾಜು ಆಗಿ ಬೆಂಕಿ ಅವಘಡದ ಸಂದರ್ಭದಲ್ಲಿ ನೀರು ಸಿಂಪಡಿಸಲು ಪ್ರಾರಂಭವಾಗುತ್ತದೆ.

*ಚಾಲಕರು ಪಾದಚಾರಿಯನ್ನು ಪ್ರಯಾಣಿಕರ ಬಾಗಿಲಿನಿಂದ ಸುಲಭವಾಗಿ ನೋಡಬಹುದಾಗಿದ್ದು ಪಾದಾಚಾರಿಗಳಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ.

ಕರ್ನಾಟಕವು ವಿವಿಧ ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ಸೇರ್ಪಡೆ ‌ಗೊಳಿಸುತ್ತಿರುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ.

ಈ ಸಂದರ್ಭದಲ್ಲಿ ಡಾ. ಕೆ ನಂದಿನಿದೇವಿ, ಭಾಆಸೇ,‌ ನಿರ್ದೇಶಕರು( ಸಿಬ್ಬಂದಿ & ಭದ್ರತಾ) , ನಿಗಮದ ಹಿರಿಯ ಅಧಿಕಾರಿಗಳು, ವೋಲ್ವೋ ಕಂಪನಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

%voice of karnataka % top kannada news
%voice of karnataka % top kannada news

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed