ಅಕ್ಟೋಬರ್ 16 ರಂದು ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಕಾರ್ಯಕ್ರಮ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ 63ನೇ ಸಂಸ್ಥಾಪನಾ ದಿನಾಚರಣೆ ನಡೆಸಲು ಸಜ್ಜಾಗಿದೆ.
ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವು ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ -2 ರ ಆವರಣದಲ್ಲಿ ಅಕ್ಟೋಬರ್16 ರಂದು ಬೆಳಗ್ಗೆ 11 ಗಂಟೆಗೆ ನಡೆಸಲು KSRTC ನಿರ್ಧರಿಸಿದೆ.
ಈ ಕಾರ್ಯಕ್ರಮವನ್ನು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ಉದ್ಘಾಟಿಸಲಿದ್ದು, ಶಾಸಕ ಎನ್.ಎ. ಹ್ಯಾರಿಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಕೆಎಸ್ಸಾರ್ಟಿಸಿ ಅಧ್ಯಕ್ಷರಾದ ಶಾಸಕ ಎಸ್.ಆರ್.ಶ್ರೀನಿವಾಸ್, ಕೆಎಸ್ಸಾರ್ಟಿಸಿ ಉಪಾಧ್ಯಕ್ಷ ಮೊಹಮ್ಮದ್ ರಿಝ್ವಾನ್ ನವಾಬ್ ಮತ್ತು ರಾಜ್ಯ ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ. ಎನ್ .ವಿ. ಪ್ರಸಾದ್ ಉಪಸ್ಥಿತರಿರಲಿದ್ದಾರೆ.
ಸಂಸ್ಥಾಪನಾ ದಿನಾಚರಣೆಯ ಮುಖ್ಯ ಹೈಲೈಟ್ಸ್:
▪️ಮೊದಲ ಬಾರಿಗೆ ಪುನಶ್ಚೇತನಗೊಂಡ ಐರಾವತ ಬಸ್ಸುಗಳಿಗೆ ಚಾಲನೆ.
▪️ಅಪಘಾತದಲ್ಲಿ ಮೃತರಾದ ಮೃತ ಕುಟುಂಬದ ಅವಲಂಬಿತರಿಗೆ ಸಾರಿಗೆ ಸುರಕ್ಷಾ ಯೋಜನೆಯಡಿ ರೂ. 1 ಕೋಟಿಯ ಚೆಕ್ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿದೆ.


Post Comment