ರಸ್ತೆಗಿಳಿಯಲಿದೆ ಐಶಾರಾಮಿ ಐರಾವತ 2.O ಬಸ್ಸುಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಐರಾವತ ಕ್ಲಬ್ ಕ್ಲಾಸ್ 2.0 (ವೋಲ್ವೋ -9600) 20 ಬಸ್ಸುಗಳನ್ನು ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದ್ದು, ದಿನಾಂಕ: 30.10.2024 ರಂದು ಸಿಎಂ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಧಾನಸೌಧದ ಮುಂಭಾಗ ಚಾಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್, ಸಾರಿಗೆ ಇಲಾಖೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಉಪಸ್ಥಿತರಿರಲಿದ್ದಾರೆ. ಶಾಸಕ ರಿಝ್ವಾನ್ ಅರ್ಶದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಸಚಿವರುಗಳು, ಸಂಸದರುಗಳು, ಶಾಸಕರುಗಳು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಕೆಎಸ್ಸಾರ್ಟಿಸಿ ಪ್ರಕಟನೆ ತಿಳಿಸಿದೆ.
Post Comment