ಆರ್ ರವೀಂದ್ರ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಗೋಪಿಲೋಲ ಸಿನಿಮಾದ ಸ್ಪೆಷಲ್ ನಂಬರ್ ಬಿಡುಗಡೆಯಾಗಿದೆ. ಕಣ್ ಕಣ್ ಟಾಕಿಂಗ್, ಕೈ ಕೈ ಟಚ್ಚಿಂಗ್ ಎಂಬ ಹಾಡಿಗೆ ಕೇಶವ ಚಂದ್ರ ಸಾಹಿತ್ಯ ಬರೆದಿದ್ದು, ಮಿದುನ್ ಅಸೋಕನ್ ಚೆನ್ನೈ ಸಂಗೀತ ಒದಗಿಸಿದ್ದು, ಶಶಾಂಕ್ ಶೇಷಗಿರಿ ಹಾಗೂ ಗೀತಾ ಭಟ್ ಧ್ವನಿಯಾಗಿದ್ದಾರೆ. ಧನಂಜಯ್ ನೃತ್ಯ ಸಂಯೋಜನೆಗೆ ನಾಯಕ ಮಂಜುನಾಥ್ ಅರಸು ಹಾಗೂ ಜಾಹ್ನವಿ ಹೆಜ್ಜೆ ಹಾಕಿದ್ದಾರೆ.
ಸಹಜ ಕೃಷಿ ಹಾಗೂ ಪ್ರೇಮ ಕಥಾ ಹಂದರ ಹೊಂದಿರುವ ಗೋಪಿಲೋಲ ಸಿನಿಮಾಗೆ ಎಸ್.ಆರ್.ಸನತ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸಹ ನಿರ್ಮಾಪಕರಾಗಿ ನಾಯಕ ಮಂಜುನಾಥ್ ಸಾಥ್ ಕೊಟ್ಟಿದ್ದಾರೆ.
ಮಂಜುನಾಥ್ ಗೆ ಜೋಡಿಯಾಗಿ ನಿಮಿಷಾ ಕೆ ಚಂದ್ರ ಅಭಿನಯಿಸ್ತಿದ್ದು, ನಟಿ ಜಾಹ್ನವಿ, ಎಸ್.ನಾರಾಯಣ್, ಪದ್ಮಾ ವಸಂತಿ, ನಾಗೇಶ್ ಯಾದವ್, ಸ್ವಾತಿ, ಹಿರಿಯ ನಿರ್ದೇಶಕ ಜೋಸೈಮನ್ ಸೇರಿದಂತೆ ತೆಲುಗು ನಟ ಸಪ್ತಗಿರಿ ತಾರಾಬಳಗದಲ್ಲಿದ್ದಾರೆ.
Post Comment