×

ಸಿಎಂ ಸಿದ್ದರಾಮಯ್ಯ ಆರೋಪಿ ಸ್ಥಾನದಲ್ಲಿದ್ದು ಅಧಿಕಾರ ನಡೆಸುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರೇ ಯಡಿಯೂರಪ್ಪನವರ ಕುರಿತು ಮಾತನಾಡುವಾಗ ಎಚ್ಚರಿಕೆಯಿಂದಿರಿ: ಬಿ.ವೈ.ವಿಜಯೇಂದ್ರ

ಹಾವೇರಿ ( ಸವಣೂರು) : ಮುಖ್ಯಮಂತ್ರಿಗಳು ಆರೋಪಿ ಸ್ಥಾನದಲ್ಲಿದ್ದು ಕೆಲಸ ನಿರ್ವಹಿಸುತ್ತಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ ಯಡಿಯೂರಪ್ಪನವರ ಕುರಿತು ಮಾತನಾಡುವಾಗ ಎಚ್ಚರಿಕೆಯಿಂದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರವಾಗಿ ಇಂದು ರೋಡ್ ಷೋ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ಕಳೆದ 30-40 ವರ್ಷಗಳಿಂದ ಸುದೀರ್ಘ ಹೋರಾಟ ಮಾಡಿ ಬಡವರು, ರೈತರ ಪರವಾಗಿ ಧ್ವನಿ ಎತ್ತಿ ಸರ್ವರಿಗೂ ಸಮಪಾಲು, ಸಮಬಾಳು ಎಂಬಂತೆ ಸರ್ವತೋಮುಖ ಅಭಿವೃದ್ಧಿಯ ಆಡಳಿತ ನೀಡಿದ್ದಾರೆ. ಯಡಿಯೂರಪ್ಪ ಅವರು ಸಿದ್ದರಾಮಯ್ಯರಂತೆ ಅದೃಷ್ಟದ ಮುಖ್ಯಮಂತ್ರಿಗಳಲ್ಲ; ಸಿದ್ದರಾಮಯ್ಯನವರು ಬಡವರು, ರೈತರ ಪರವಾಗಿ ಹೋರಾಟ ಮಾಡಿಲ್ಲ. ಚಳವಳಿ ಮಾಡಿದವರಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪನವರ ಸರಕಾರ ಕೊಟ್ಟ ಭಾಗ್ಯಲಕ್ಷ್ಮಿ ಯೋಜನೆಯನ್ನು ಸಿದ್ದರಾಮಯ್ಯನವರ ಸರಕಾರ ಸ್ಥಗಿತಗೊಳಿಸಿದೆ. ಕಾಂಗ್ರೆಸ್ ಸರಕಾರ ಬಡವರ ವಿರೋಧಿ ಸರಕಾರ. ಕಾಂಗ್ರೆಸ್ ಪಕ್ಷದ್ದು ರೈತವಿರೋಧಿ ಸರಕಾರ. ಅಭಿವೃದ್ಧಿ ಶೂನ್ಯ ಸರಕಾರ ಇದು. ಈ ಸರಕಾರ ಬದುಕಿದ್ದೂ ಸತ್ತಂತಿದೆ. ಈ ಭ್ರಷ್ಟ ಸರಕಾರವನ್ನು ಎಷ್ಟು ಬೇಗ ಕಿತ್ತೆಸೆಯುತ್ತೇವೋ ಅಷ್ಟು ಒಳ್ಳೆಯದು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಹಾಗೂ ಇತರ ಪಕ್ಷಗಳ ಶಾಸಕರಿಗೆ ರಸ್ತೆ, ಶಾಲೆ, ಆಸ್ಪತ್ರೆ ಮತ್ತಿತರ ಕಾಮಗಾರಿ, ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯವಾಗುತ್ತಿಲ್ಲ ಎಂಬ ಬೇಸರವಿದೆ. ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ತಿಳಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಪಕ್ಷವು ಕಳೆದೆರಡು ವರ್ಷಗಳಲ್ಲಿ ಯಾವುದೇ ಹೊಸ ಯೋಜನೆ, ಅಭಿವೃದ್ಧಿ ಕಾರ್ಯವನ್ನು ಘೋಷಿಸಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದ ಶಾಸಕ ರಾಜು ಕಾಗೆಯವರು, ಕಾಂಗ್ರೆಸ್ ಸರಕಾರಕ್ಕೆ ಅಭಿವೃದ್ಧಿಗೆ ಹಣ ಕೊಡಲು ಸಾಧ್ಯವಾಗುತ್ತಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಹೇಳುತ್ತಾರೆ. ಮತ್ತೊಂದು ಕಡೆ ಸರಕಾರಿ ನೌಕರರಿಗೆ ಸಂಬಳ ಕೊಡಲು ಕೂಡ ಈ ಸರಕಾರಕ್ಕೆ ಆಗುತ್ತಿಲ್ಲ. ಬೆಂಗಳೂರು, ದಾವಣಗೆರೆಯಲ್ಲಿ ಕಾಮಗಾರಿಯ ಹಣ ಸಿಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ವಿವರಿಸಿದರು.

ನಿನ್ನೆ ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸಹಾಯಕನ (ಪಿ.ಎ.) ಬೆದರಿಕೆಯಿಂದ ಎಸ್‍ಡಿಎ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡದ್ದು ವರದಿಯಾಗಿದೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ಬಹಿರಂಗವಾಗಿದೆ. ನಿಗಮದಿಂದ ದೋಚಿದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿಕೊಂಡಿದ್ದಾರೆ ಎಂದು ತಿಳಿಸಿದರು.

ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಮಾಜಿ ಸಚಿವ ಬಿ.ಸಿ.ಪಾಟೀಲ್ ಮತ್ತು ಪ್ರಮುಖರು ಭಾಗವಹಿಸಿದ್ದರು.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed