ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯಲ್ಲಿ ನಡೆದ ಇಂದಿನ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರು ನೂತನ ಬಸ್ಸುಗಳ ಲೋಕಾರ್ಪಣೆಗೆ ಚಾಲನೆ ನೀಡಿದರು.

ಅಪಘಾತ ರಹಿತ ಸೇವೆಗಾಗಿ 43 ಚಾಲಕರಿಗೆ “ಸುರಕ್ಷಾ ಚಾಲಕ” ಬೆಳ್ಳಿ ಪದಕ ಪ್ರದಾನ
ಸಂಸ್ಥೆಯ ನೂತನ ಯೋಜನೆಗಳಾದ ಸಾರಿಗೆ ಸಂಜೀವಿನಿ ಯೋಜನೆಯಡಿ ಕಾರವಾರ/ಬೆಳಗಾವಿ/ಗದಗ ಸರ್ಕಾರಿ ವಿಜ್ಞಾನ ಸಂಸ್ಥೆಗಳೊಂದಿಗೆ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಗೆ ಚಾಲನೆ ನೀಡಲಾಯಿತು.
- ವಾಯವ್ಯ ಸಾರಿಗೆ ಸಂಪದ ಡಿಜಿಟಲ್ ತ್ರೈಮಾಸಿಕ ಪತ್ರಿಕೆಯ ಬಿಡುಗಡೆ
- ಮೃತಪಟ್ಟ ಸಂಸ್ಥೆಯ ನೌಕರರ ಅವಲಂಬಿತರಿಗೆ ನೌಕರರ ಕುಟುಂಬ ಕಲ್ಯಾಣ ನಿಧಿ ಯೋಜನೆಯ ರೂ 5 ಲಕ್ಷ ಮೊತ್ತದ ಚೆಕ್ ವಿತರಣೆ ಮತ್ತು ಸಂಸ್ಥೆಯಲ್ಲಿ ಮೃತಪಟ್ಟ ನೌಕರರ ಅವಲಂಬಿತರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ರೂ 50 ಲಕ್ಷದ ಮೊತ್ತದ ಅಪಘಾತ ವಿಮಾ ಯೋಜನೆಯ ಚೆಕ್ ವಿತರಣೆ,
- ಕೆನರಾ ಬ್ಯಾಂಕ್ ರವರೊಂದಿಗೆ ರೂ.1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆಯ ಒಡಂಬಡಿಕೆ.
- ನೌಕರರು ಭವಿಷ್ಯ ನಿಧಿ ಮುಂಗಡಕ್ಕೆ ಅರ್ಜಿ ಸಲ್ಲಿಸುವ ಮತ್ತು ವಾಣಿಜ್ಯ ಮಳಿಗೆಗಳ ಬಾಡಿಗೆ ಮೊತ್ತವನ್ನು UPI ಮೂಲಕ ಪಾವತಿಸುವ ತಂತ್ರಾಂಶಗಳ ಚಾಲನೆ.
- ನೂತನ ಕಿರಿಯ ಸಹಾಯಕ ಮತ್ತು ತಾಂತ್ರಿಕ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ಪತ್ರಗಳ ವಿತರಣೆ,
2024-25 ನೇ ಸಾಲಿನ ಅಂತರ ವಿಭಾಗೀಯ ಕ್ರೀಡಾ ಮತ್ತು ಕಲಾ ಚಟುವಟಿಕೆಗಳಲ್ಲಿ ವಿಜೇತರಿಗೆ ಪಾರಿತೋಷಕ ವಿತರಣೆ,
2023-24 ನೇ ಸಾಲಿನಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್.ಲಾಡ್ ರವರು ಮತ್ತು ಸಂಸ್ಥೆಯ ಮಾನ್ಯ ಅಧ್ಯಕ್ಷರಾದ ಭರಮಗೌಡ (ರಾಜು) ಅಲಗೌಡ ಕಾಗೆ ರವರು ಕಾರ್ಯಕ್ರಮದಲ್ಲಿ ಉಪಸ್ಥಿತಿವಹಿಸಿದ್ದರು. ಹುಬ್ಬಳ್ಳಿ-ಧಾರವಾಡ (ಪೂರ್ವ) ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯ ಪ್ರಸಾದ್, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾಕಿರ್ ಸನದಿ, ಸಂಸ್ಥೆಯ ಮಾನ್ಯ ಉಪಾಧ್ಯಕ್ಷರಾದ ಪೀರಸಾಬ್ ಅ. ಕೌತಾಳ, ಮಾಜಿ ಸಂಸದರಾದ ಐ.ಜಿ.ಸನದಿ, ಮಾಜಿ ಶಾಸಕರು ಹಾಗೂ ಸಂಸ್ಥೆಯ ಮಾಜಿ ಅಧ್ಯಕ್ಷರಾದ ವಿ.ಎಸ್.ಪಾಟೀಲ್, ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ.ಆರ್.ಜೆ, ಭಾ.ಆ.ಸೇ, ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾII ಗೋಪಾಲ ಎಂ.ಬ್ಯಾಕೋಡ ಭಾ.ಪೊ.ಸೇ, ಹಾಗೂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ.ಎಂ, ಭಾ.ಆ.ಸೇ, ರವರು ಉಪಸ್ಥಿತರಿದ್ದರು. ಅಲ್ಲದೇ ಸಂಸ್ಥೆಯ ಎಲ್ಲ ಇಲಾಖಾ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿಗಳು, ಬೆಳ್ಳಿ ಪದಕ ವಿಜೇತ ಚಾಲಕರ ಕುಟುಂಬ ಸದಸ್ಯರು ಹಾಜರಿದ್ದರು.
Post Comment