×

ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಧಾರ್ಮಿಕ ಬದ್ಧತೆ; ಉಳಿಯಿತು 10,700 ಎಕರೆ ‘ದೇವರ ಸ್ವತ್ತು!

ಭಾರತದ ಇತಿಹಾಸದಲ್ಲೇ ಐತಿಹಾಸಿಕ ಕ್ರಮ; ಹಿಂದೂ ದೇವಾಲಯಗಳ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ ಕೈಗೊಂಡ ರಾಜ್ಯ ಸರ್ಕಾರ

ಬೆಂಗಳೂರು: ಬುಟಾಟಿಕೆ ಮತ್ತು ಪೊಳ್ಳು ಹಿಂದುತ್ವವಾದ ಪ್ರತಿಪಾದಕರಾದ ಬಿ.ಜೆ.ಪಿ ಯವರು ಧರ್ಮ ಧರ್ಮಗಳ‌ ನಡುವೆ ದ್ವೇಷದ ಬೆಂಕಿ ಹಚ್ಚಿ, ಹಿಂದೂ ಧರ್ಮದ ಉಳಿವಿಗಾಗಿ ಯಾವುದೇ ಕಾರ್ಯ ಮಾಡದಿದ್ದರೂ, ಬರೀ ಬಾಯಿ ಮಾತಿನಲ್ಲಿ ಹಿಂದೂ ಧರ್ಮ, ದೇವಾಲಯಗಳ ಬಗ್ಗೆ ಪುಂಖಾನುಪುಂಖವಾಗಿ ಬೊಗಳೆ ಭಾಷಣ ಮಾಡುವವರ ಮುಂದೆ ಯಾವುದೇ ಸದ್ದುಗದ್ದಲವಿಲ್ಲದೆ ತಮ್ಮ‌ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಮೂಲಕ
ಹಿಂದೂ ಧರ್ಮ ಮತ್ತು ದೇವಾಲಯಗಳ ರಕ್ಷಣೆಗೆ ಪಣ ತೊಟ್ಟಿರುವ ರಾಮಲಿಂಗಾರೆಡ್ಡಿಯವರ ಕಾರ್ಯ ಆಸ್ತಿಕ ಸಮುದಾಯದಲ್ಲಿ ಸಂತೋಷದ ಹೊನಲನ್ನು‌ ಹರಿಸಿದೆ ಎಂದು ಅರ್ಚಕ ಸಮುದಾಯ ಹರ್ಷ ವ್ಯಕ್ತಪಡಿಸಿದೆ.

ರಾಜ್ಯದ ಮುಜರಾಯಿ ದೇವಸ್ಥಾನದ ವ್ಯಾಪ್ತಿಯಲ್ಲಿ ಬರುವ ಸಾವಿರಾರು ಎಕರೆ ಜಮೀನು ಅನ್ಯರ ಪಾಲಾಗಿತ್ತು. ಕೆಲ ಸಂಸ್ಥೆಗಳು, ಟ್ರಸ್ಟ್ ಗಳು ಹಾಗೂ ಖಾಸಗಿ ವ್ಯಕ್ತಿಗಳು ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದರು. ಇದನ್ನು ಹಿಂದಿನ ಬಿಜೆಪಿ ಸರಕಾರ ತೆರವು ಮಾಡುವ ಕಡೆ ಯಾವುದೇ ಒಲವು ತೋರಲಿಲ್ಲ.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಮುಜರಾಯಿ ಇಲಾಖೆ ಖಾತೆಯನ್ನು ವಹಿಸಿಕೊಂಡ ರಾಮಲಿಂಗಾ ರೆಡ್ಡಿ ಅವರ ಬದ್ಧತೆಯಿಂದ ಈವರೆಗೆ ರಾಜ್ಯದ ವಿವಿಧ ದೇವಸ್ಥಾನಗಳ 10,700 ಎಕರೆ ಜಮೀನನ್ನು ರಕ್ಷಣೆ ಮಾಡಲಾಗಿದೆ. ಒಟ್ಟು 5022 ಆಸ್ತಿಗಳಿಗೆ ಕಂದಾಯ ಇಲಾಖೆಯಿಂದ ಸೂಕ್ತ ದಾಖಲೆಗಳನ್ನು ಸೃಷ್ಟಿಸಿ, ದೇವಸ್ಥಾನಗಳ ಅಧೀನಕ್ಕೆ ನೀಡಲಾಗಿದೆ.

ಒತ್ತುವರಿ ತೆರವುಗೊಳಿಸಿದ ಮುಜರಾಯಿ ಇಲಾಖೆ:
ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿದ 34,564 ದೇವಸ್ಥಾನಗಳ ಪೈಕಿ ಬಹುತೇಕ ದೇವಸ್ಥಾನಗಳಿಗೆ ಸರಕಾರ ಮತ್ತು ದಾನಿಗಳು ನೀಡಿದ ಆಸ್ತಿಯಿದೆ. ಆದರೆ, ಬಹುತೇಕ ದೇವಸ್ಥಾನಗಳ ಆಸ್ತಿ ಖಾಸಗಿ ಪಾಲಾಗಿತ್ತು. ಇದೀಗ ಸರ್ವೆ ನಡೆಸಿ, ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಆಸ್ತಿಗಳನ್ನು ಮರು ವಶಪಡಿಸಿಕೊಳ್ಳಲಾಗಿದೆ.

ರಾಜ್ಯದಲ್ಲಿ 34,166 ಸಿ ದರ್ಜೆಯ ದೇವಸ್ಥಾನಗಳು, 193 ಬಿ ದರ್ಜೆಯ ದೇವಸ್ಥಾನ ಹಾಗೂ 205 ‘ಎ’ ದರ್ಜೆಯ ದೇವಸ್ಥಾನಗಳಿವೆ. ಈ ದೇವಸ್ಥಾನಗಳಿಗೆ ಸರ್ಕಾರದಿಂದ ಹಾಗೂ ದಾನಿಗಳಿಂದ ದಾನದ ರೂಪದಲ್ಲಿ ಬಂದ ಸಾವಿರಾರು ಎಕರೆ ಆಸ್ತಿಯಿದೆ. ಆದರೆ, ಈವರೆಗೆ ಆ ಆಸ್ತಿಗಳಿಗೆ ಸೂಕ್ತ ದಾಖಲೆಗಳಿರಲಿಲ್ಲ. ಇದೀಗ ಕಂದಾಯ ಇಲಾಖೆ ಎಲ್ಲ ಆಸ್ತಿಗಳಿಗೆ ದಾಖಲೆ ಒದಗಿಸುವ ಕೆಲಸ ಮಾಡಿದೆ.

ರಾಜ್ಯ ಸರಕಾರ ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದ ಜಮೀನನ್ನು ದೇವಸ್ಥಾನಗಳಿಗೆ ಮರಳಿ ಕೊಡಿಸಲಾಗಿದೆ. ದಾಖಲೆಗಳು ಇಲ್ಲದೇ ಇದ್ದ ಜಮೀನುಗಳಿಗೆ ಸೂಕ್ತ ದಾಖಲೆ ಸೃಷ್ಟಿಸಿಕೊಡುವಲ್ಲಿ ಕಂದಾಯ ಇಲಾಖೆ ಯಶಸ್ವಿಯಾಗಿದೆ.

ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಂಡ ಪರಿಣಾಮ ವರ್ಷದಲ್ಲಿ 5022 ಆಸ್ತಿಗಳನ್ನು ಇಲಾಖೆಯ ವಶಕ್ಕೆ ಪಡೆಯಲಾಗಿದೆ. ಇದಕ್ಕೆ ಸೂಕ್ತ ದಾಖಲೆ ಒದಗಿಸಿದ ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಇಲಾಖೆ ಅಧಿಕಾರಿಗಳಿಗೆ ಮುಜರಾಯಿ ಇಲಾಖೆ ವತಿಯಿಂದ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ, ಆ ಪಕ್ಷದಿಂದ ಮಾಡಲು ಆಗದ ಕೆಲಸವನ್ನು ನಾವು ಮಾಡಿದ್ದೇವೆ. ಧರ್ಮ ಬೇರೆ ರಾಜಕೀಯ ಬೇರೆ, ಧರ್ಮ ಭಾವನೆಗೆ ಸಂಬಂಧಿಸಿದ್ದು ಅದರೊಡನೆ ರಾಜಕೀಯ ಬೆರೆಸಿ, ಕಿಚ್ಚು ಹಚ್ಚಿಸುವ ಕೆಲಸವನ್ನು ಇನ್ನಾದರೂ ಬಿ.ಜೆ.ಪಿ ಅವರು ಬಿಡಬೇಕು ಎಂದು ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.

ಹಿಂದೂ ದೇವಾಲಯಗಳನ್ನು ರಕ್ಷಿಸಲು ಇವರ ಅಧಿಕಾರವಧಿಯಲ್ಲಿ ಇವರಿಗೆ ಸಾಧ್ಯವಾಗಲಿಲ್ಲವೇಕೆ? ಕಾಂಗ್ರೆಸ್ ಸರ್ಕಾರವೇ ಬಂದು ಈ ಕ್ರಾಂತಿಕಾರಿ ಬದಲಾವಣೆ‌ ಮಾಡಲೆಂದು ಕಾಯುತ್ತಿದ್ದರೇ ಇವರು ಎಂದು ಕಿಡಿಕಾರಿದರು.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Previous post

ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ ಎಂದ ಕೇಂದ್ರ ಸಚಿವ

Next post

ಸರಕಾರ ಸಾರಿಗೆ ಇಲಾಖೆಯನ್ನು “ಶಕ್ತಿ” ಹೆಸರಿನಲ್ಲಿ “ನಿಶ್ಯಕ್ತಿ”ಗೊಳಿಸಿದೆ ಎಂದ ಬಿಜೆಪಿಗೆ ಪಕ್ಕಾ ಲೆಕ್ಕ ಕೊಟ್ಟ ಸಚಿವರು

Post Comment

You May Have Missed