×

ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಐಹೊಳೆ 132 ಕೊಠಡಿಗಳ ಬ್ಲಾಕ್‌ ಅನ್ನು ಉದ್ಘಾಟಿಸಿದ ಸಚಿವ ರಾಮಲಿಂಗಾ ರೆಡ್ಡಿ

ರಾಜ್ಯದಿಂದ ತೆರಳುವ ಭಕ್ತರಿಗಾಗಿ ಮತ್ತಷ್ಟು ಯೋಜನೆಗಳನ್ನು ಕೈಗೆತ್ತಿಕೊಂಡ ಕರ್ನಾಟಕ ಸರಕಾರ

ಕರ್ನಾಟಕ ರಾಜ್ಯ ಸರ್ಕಾರವು ತಿರುಮಲಕ್ಕೆ ಶ್ರೀವೆಂಕಟೇಶ್ವರಸ್ವಾಮಿಯ ದರ್ಶನಕ್ಕಾಗಿ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ರೂ.200 ಕೋಟಿ ರೂ.ಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.

%voice of karnataka % top kannada news
  • ಈಗಾಗಲೇ 110 AC ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ಛತ್ರದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಸಂಕೀರ್ಣಗಳ ಪೈಕಿ 132 ಹವಾನಿಯಂತ್ರಣರಹಿತ ಕೊಠಡಿಗಳನ್ನು ಹೊಂದಿರುವ ಐಹೊಳೆ ಬ್ಲಾಕ್ ಕಟ್ಟಡವನ್ನು  ದಿನಾಂಕ:20.01.2025 ರಂದು ಸಾರಿಗೆ ಹಾಗೂ ಮುಜರಾಯಿ ಸಚಿವರು ಉದ್ಘಾಟಿಸಿದರು.

* ಈ ಕಟ್ಟಡದಲ್ಲಿನ ಪ್ರತಿ ಕೊಠಡಿಗಳಿಗೆ 24 ಗಂಟೆಗಳ ಅವಧಿಗೆ ಕೊಠಡಿ ನಿರ್ವಹಣಾ ಶುಲ್ಕ ರೂ.1350/- (+GST) ನಿಗಧಿ ಪಡಿಸಿದ್ದು, ಕಡಿಮೆ ಬೆಲೆಯಲ್ಲಿ ಸುಸಜ್ಜಿತ ಕೊಠಡಿಗಳನ್ನು ಯಾತ್ರಾರ್ಥಿಗಳಿಗೆ ಒದಗಿಸುವ ಮೂಲಕ ಅನುಕೂಲ ಮಾಡಿಕೊಡಲಾಗಿದೆ.

* ನೂತನವಾಗಿ ತಿರುಮಲದಲ್ಲಿ ನಿರ್ಮಿಸಲಾಗಿರುವ ವಸತಿ ಸಂಕೀರ್ಣ ಮತ್ತು  ಕೃಷ್ಣದೇವರಾಯ ಬ್ಲಾಕ್ ನಲ್ಲಿನ 36 ಹವಾ ನಿಯಂತ್ರಿತ ಸೂಟ್‌ಗಳನ್ನು ಹಾಗೂ 500 ಆಸನಗಳ ಸಾಮರ್ಥ್ಯವುಳ್ಳ ತಿರುಮಲದಲ್ಲಿಯೇ ಬೃಹತ್ ಹಾಗೂ ನವೀನ ಮಾದರಿಯ ಸುಸಜ್ಜಿತ ಕಲ್ಯಾಣ ಮಂಟಪವಾದ ಶ್ರೀ ಕೃಷ್ಣ ಒಡೆಯರ್ ಬ್ಲಾಕ್ ಕಟ್ಟಡಗಳ ಕಾಮಗಾರಿ ಮುಕ್ತಾಯಗೊಂಡಿದ್ದು ಅಂತಿಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲಾಗುತ್ತಿದೆ.

* ತಿರುಪತಿ ಹಾಗೂ ತಿರೂಚಾನೂರಿನಲ್ಲಿ   ಕರ್ನಾಟಕ ರಾಜ್ಯ ಛತ್ರದಲ್ಲಿ ಹಾಲಿ ಇರುವ 24 ಕೊಠಡಿಗಳನ್ನು ಮತ್ತು ಕಲ್ಯಾಣ ಮಂಟಪಗಳನ್ನು ನವೀಕರಣಗೊಳಿಸಿ, ಯಾತ್ರಾರ್ಥಿಗಳಿಗೆ ಹಂಚಿಕೆ ಮಾಡುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.

* ಕರ್ನಾಟಕ ರಾಜ್ಯ ಛತ್ರದಲ್ಲಿ 50 ಸುಸಜ್ಜಿತ ಕೊಠಡಿಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಒಳಗೊಂಡ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ಸಿದ್ಧಗೊಳಿಸಲಾಗುತ್ತಿದೆ.

ಕಲ್ಯಾಣ ಮಂಟಪ ಬ್ಲಾಕ್ ಹಾಗೂ ವಿವಿಐಪಿ ಕೊಠಡಿಗಳ ಬ್ಲಾಕ್ 2025ರ ಏಪ್ರಿಲ್ ಅಥವಾ ಮೇ ಮಾಹೆಯಲ್ಲಿ ಸಂಪೂರ್ಣವಾಗಿ ಪೂರ್ಣಗೊಳ್ಳಲಿದ್ದು, ಈ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ರಾಜ್ಯದ ಮುಖ್ಯ ಮಂತ್ರಿಗಳ ಹಾಗೂ ಆಂಧ್ರ ಪ್ರದೇಶದ ಮುಖ್ಯ ಮಂತ್ರಿಗಳ ಸಮ್ಮುಖದಲ್ಲಿ ನೆರವೇರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ ದೇವಾಲಯಗಳ ವಸತಿ ಕಾಯ್ದಿರಿಸುವಿಕೆಯ ವೆಬ್ ಸೈಟ್ Karnatakatemplesaccommodation.com ಮೂಲಕ ಶೇ.60% ರಷ್ಟು Online ಮೂಲಕ ಹಾಗೂ ಶೇ.40% Offline ಮೂಲಕ ಕೊಠಡಿಗಳನ್ನು ಹಂಚಿಕೆ ಮಾಡಿ ಅನುಕೂಲ ಮಾಡಿಕೊಡಲಾಗುತ್ತಿದೆ‌ ಎಂದು ಧಾರ್ಮಿಕ ದತ್ತಿ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed