2,000 ಹೊಸ ಬಸ್‌ಗಳ ಸೇರ್ಪಡೆಗೆ ಅನುದಾನ; ಸಿಎಂ ನುಡಿದಂತೆ ನಡೆದಿದ್ದಾರೆ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಶಕ್ತಿಯಡಿ, ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು 2,000 ಹೊಸ ಬಸ್‌ಗಳನ್ನು ಖರೀದಿಸಲು ಸರ್ಕಾರ ಮುಂದಾಗಿದೆ. ಈ ಕುರಿತು ಸರ್ಕಾರದಿಂದ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಅಧಿವೇಶನದಲ್ಲಿ ಘೋಷಿಸಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಕುರಿತು ಪ್ರತಿಕ್ರಿಯಿಸಿ, “ಶಕ್ತಿ ಯೋಜನೆಯಿಂದಾಗಿ ದಿನನಿತ್ಯ ಪ್ರಯಾಣಿಸುವವರ ಸಂಖ್ಯೆ ಲಕ್ಷಗಳಿಂದ ಕೋಟಿಗೆ ತಲುಪಿದೆ. ಹಿಂದಿನ ಸರ್ಕಾರದಲ್ಲಿ ಹೊಸ ಬಸ್‌ಗಳ ಸೇರ್ಪಡೆಯಾಗಿರಲಿಲ್ಲ. ನೇಮಕಾತಿಯೂ ಸ್ಥಗಿತಗೊಂಡಿತ್ತು. ಆದರೆ, ನಮ್ಮ ಸರ್ಕಾರ 5,800 ಹೊಸ ಬಸ್‌ಗಳ ಸೇರ್ಪಡೆಗೆ ಮತ್ತು 9,000 ಹೊಸ ನೇಮಕಾತಿಗೆ ಅನುಮತಿ ನೀಡಿದ ಪರಿಣಾಮ, ಸಾರಿಗೆ ಸಂಸ್ಥೆಗಳು ಹೊಸ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸಬಹುದು,” ಎಂದು ಹೇಳಿದರು.
ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಗಳಿಗೆ 2,000 ಕೋಟಿ ಸಾಲವನ್ನು ಅನುಮತಿಸಿದೆ. ಈ ಸಾಲದ ಅದಲು ಮತ್ತು ಬಡ್ಡಿಯನ್ನು ಸರ್ಕಾರವೇ ಭರಿಸುವುದಾಗಿ ಘೋಷಿಸಿದ್ದು, ಬಜೆಟ್‌ನಲ್ಲಿ ಇದರ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಅದೇ ವೇಳೆ, ಹಳೆಯ ಬಸ್‌ಗಳನ್ನು ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಕೂಡ ನಡೆಯಲಿದ್ದು, ಪರಿಷ್ಕೃತ ಯೋಜನೆಯಡಿ 2,000 ಹೊಸ ಬಸ್‌ಗಳ ಖರೀದಿಗೆ ಸರ್ಕಾರವೇ ಅನುದಾನ ಒದಗಿಸಲಿದೆ. ಈ ನಿರ್ಧಾರ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೇವೆ ಒದಗಿಸುವತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಸಾರಿಗೆ ವ್ಯವಸ್ಥೆಯ ಸುಧಾರಣೆ ಮತ್ತು ಜನಸಾಮಾನ್ಯರ ಪ್ರಯಾಣ ಅನುಕೂಲತೆಗಳ ಕುರಿತು ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದು, ಶಕ್ತಿ ಯೋಜನೆ ಈ ಮಾರ್ಗದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.
Post Comment