ರೈಲ್ವೆ ಪರೀಕ್ಷೆಯಲ್ಲಿ ಧಾರ್ಮಿಕ ಚಿಹ್ನೆಗಳನ್ನು ನಿಷೇಧಿಸಿರುವುದನ್ನು ಟೀಕಿಸಿದ ಸಚಿವರು
ಬೆಂಗಳೂರು: ಕೇಂದ್ರ ರೈಲ್ವೆ ಇಲಾಖೆಯ ಪರೀಕ್ಷೆಯಲ್ಲಿ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಮುಂತಾದ ಧಾರ್ಮಿಕ ಚಿಹ್ನೆಗಳನ್ನು ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ತು ಖಂಡಿಸಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, “ಈ ಕುರಿತು ಬಿಜೆಪಿ ನಾಯಕರು ಮೋದಿ ಜಿ ಅವರನ್ನು ದೂಷಿಸುತ್ತಾರೆಯೇ? ಅಥವಾ ಬದಲಾವಣೆಗೆ ಪತ್ರ ಬರೆಯುತ್ತಾರೆಯೇ? ಇಲ್ಲದೇ ದೇಶದಾದ್ಯಂತ ಚಳುವಳಿ ನಡೆಸುತ್ತಾರೆಯೇ?” ಎಂಬ ಪ್ರಶ್ನೆ ಎತ್ತಿದ್ದಾರೆ.
ಅಲ್ಲದೇ, ಕಳೆದ ವರ್ಷ ಕರ್ನಾಟಕದಲ್ಲಿ ನಡೆದ CET ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಗೆ ಸಂಬಂಧಿಸಿ ಆ ಸಂದರ್ಭದಲ್ಲಿ ಬಿಜೆಪಿಗರು ಹಿಂದೂ ವಿರೋಧಿ ಸರ್ಕಾರ ಎಂಬ ಅಪಪ್ರಚಾರ ನಡೆಸಿದ್ದರು. ಆದರೆ ಈಗ ಕೇಂದ್ರದ ನೇಮಕಾತಿ ಪರೀಕ್ಷೆಯಲ್ಲೇ ಧಾರ್ಮಿಕ ಚಿಹ್ನೆಗಳನ್ನು ನಿಷೇಧಿಸಲಾಗಿದೆ,” ಎಂದು ಸ್ಮರಿಸಿದರು.
ಅಂದು ನಮ್ಮ ಸರ್ಕಾರದ ಮೇಲೆ ರಾಜಕೀಯ ಆಪಾದನೆ ಮಾಡಿದವರು, ಈಗ ಮೋದಿಜಿಯ ನಿರ್ಧಾರವನ್ನು ಪ್ರಶ್ನಿಸುವ ಧೈರ್ಯ ತೋರುವರೆ?” ಎಂಬ ಪ್ರಶ್ನೆಯ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ತೀಕ್ಷ್ಣ ಪ್ರಶ್ನೆ ಮುಂದಿಟ್ಟಿದ್ದಾರೆ.
ಈ ಬಗ್ಗೆ ಬಿ.ಜೆ.ಪಿ ಅವರು ಮೋದಿ ಜೀ ಅವರನ್ನು ದೂಷಿಸಿಸುತ್ತಾರೆಯೇ? ಅಥವಾ ಮೋದಿಜೀ ಅವರಿಗೆ ಪತ್ರ ಬರೆದು ಮಾರ್ಪಾಡಿಗೆ ಕೇಳುತ್ತಾರೆಯೇ? ಇಲ್ಲ ರಾಜ್ಯದ್ಯಾಂತ ಮೋದಿ ಜೀ ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಚಳುವಳಿ/ ಜಾಥಾ/ ಮೆರವಣಿಗೆ ನಡೆಸುತ್ತಾರೆಯೇ ಎಂಬುದನ್ನು ಕೂತೂಹಲದಿಂದ ಎದುರು ನೋಡುತ್ತಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
Post Comment