ಬೆಂಗಳೂರು, ಮೇ 7: ದಿನಾಂಕ 22.04.2025 ರಂದು ಕಾಶ್ಮೀರದ ಪಹಲ್ಗಾಂದಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ಭಾರತವು ಇಂದು ಮುಂಜಾನೆ ಪಾಕ್-ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ‘ಆಪರೇಶನ್ ಸಿಂಧೂರ’ ಎಂಬ ಹೆಸರಿನಲ್ಲಿ ಯಶಸ್ವಿಯಾಗಿ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ.
ಭಾರತೀಯ ಸೇನೆಯ ಈ ಸಾಹಸಿಕ ಹೆಜ್ಜೆಗೆ ಕರ್ನಾಟಕ ಸರ್ಕಾರವೂ ಶ್ಲಾಘನೆ ವ್ಯಕ್ತಪಡಿಸಿದ್ದು, ರಾಜ್ಯದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಸೇನೆಯ ಕಾರ್ಯಾಚರಣೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಸೇನೆಯ ಶೌರ್ಯಕ್ಕೆ ಗೌರವವಿಧಿಸಲು, ಸಚಿವರ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನಡೆಸುವಂತೆ ಆದೇಶ ನೀಡಲಾಗಿದೆ. ಭಾರತೀಯ ಸೇನೆಗೆ ಶಕ್ತಿ ಮತ್ತು ಸಮರ್ಥತೆಯನ್ನು ಭಗವಂತನು ಅನುಗ್ರಹಿಸಲಿ ಎಂಬ ಸಂಕಲ್ಪದೊಂದಿಗೆ ಈ ಪೂಜೆಗಳು ನೆರವೇರಲಿದೆ.
ಸರ್ಕಾರದ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಎಲ್ಲಾ ದೇವಾಲಯಗಳಿಗೆ ಸೂಚಿಸಲಾಗಿದೆ.
Post Comment