ಸಾಂಕೇತಿಕವಾಗಿ ಉದ್ಘಾಟನೆಗೊಂಡ ಮಾದರಿ ಕಾರ್ಯಕ್ರಮ
ಬೆಂಗಳೂರು: ಬಿ.ಟಿ.ಎಂ ವಿಧಾನಸಭಾ ಕ್ಷೇತ್ರದ 43 ಸರ್ಕಾರಿ, ಅನುದಾನಿತ ಶಾಲೆಗಳು ಮತ್ತು ಕಾನ್ವೆಂಟ್ ಶಾಲೆಗಳಲ್ಲಿ ಓದುತ್ತಿರುವ 13,000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನೋಟ್ಬುಕ್ಗಳು ಮತ್ತು ಶಾಲಾ ಬ್ಯಾಗ್ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಸಾರಿಗೆ ಮತ್ತು ಮುಖ್ಯಮಂತ್ರಿ ಸಚಿವರಾದ ರಾಮಲಿಂಗಾರೆಡ್ಡಿ ಅವರ ಶಿಕ್ಷಣ ಸ್ನೇಹಿ ಯೋಜನೆಯಡಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇಂದು ಕೋರಮಂಗಲದ ಸರ್ಕಾರಿ ಪ್ರಾಥಮಿಕ ಮಾಡಲ್ ಶಾಲೆಯಲ್ಲಿ ಸಾಂಕೇತಿಕವಾಗಿ ಈ ವಿತರಣೆಗೆ ಚಾಲನೆ ನೀಡಲಾಯಿತು. ಜೂನ್ 9ರಿಂದ 15ರ ವರೆಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು, ಮಾಜಿ ಬಿಬಿಎಂಪಿ ಸದಸ್ಯರು, ಬ್ಲಾಕ್ ಅಧ್ಯಕ್ಷರು ಮತ್ತು ಕಾಂಗ್ರೆಸ್ ನಾಯಕರೊಂದಿಗೆ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೋಟ್ಬುಕ್ಗಳು ಮತ್ತು ಬ್ಯಾಗ್ಗಳನ್ನು ನೇರವಾಗಿ ವಿತರಿಸಲಿದ್ದಾರೆ.
ಈ ಯೋಜನೆಯು ಬಡ ವರ್ಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಗುರಿಯನ್ನು ಹೊಂದಿದೆ. ಬಿ.ಟಿ.ಎಂ ಕ್ಷೇತ್ರದಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಕಾನ್ವೆಂಟ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಈ ಮೂಲಕ ಉತ್ತಮ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ ಎಂದು ಸಚಿವರಾದ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
Post Comment