ಬೆಂಗಳೂರು, ಆಗಸ್ಟ್ 1:
ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್) ಧನ್ವಂತರಿ ರಸ್ತೆಗೆ ಹೊಂದಿಕೊಂಡ ಭಾಗದಲ್ಲಿ ಇದುವರೆಗೆ ಯಾವುದೇ ಬ್ಯಾಂಕ್ ಎಟಿಎಂ ಸೌಲಭ್ಯವಿಲ್ಲದೆ, ನಿಗಮದ ಸಿಬ್ಬಂದಿ ಹಾಗೂ ಸಾರ್ವಜನಿಕರು ತುರ್ತು ಸಂದರ್ಭಗಳಲ್ಲಿ ಹಣ ಪಡೆಯುವಲ್ಲಿ ತೀವ್ರ ತೊಂದರೆ

ಈ ಸಮಸ್ಯೆಯನ್ನು ಮನಗಂಡು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಹಕಾರದೊಂದಿಗೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ (IOB) ಸಂಸ್ಥೆಯು ಟರ್ಮಿನಲ್ 1 ರ ಮುಖ್ಯ ರಸ್ತೆಯಲ್ಲಿ ಹೊಸ ಎಟಿಎಂ ಅನ್ನು ಸ್ಥಾಪಿಸಿದೆ. ಇಂದು ಈ ಎಟಿಎಂ ಕೇಂದ್ರವನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಭಾಆಸೇ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಬೆಂಗಳೂರು ವಲಯದ ಪ್ರಾದೇಶಿಕ ಮುಖ್ಯಸ್ಥರಾದ ಉಮೇಶ್ ಕುಮಾರ್ ಸಿಂಗ್, ಎಜಿಎಂ ಸಂತೋಷ ಕುಮಾರ್ ಪಾಂಡೆ, ಮತ್ತು ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಉದ್ಘಾಟನೆಯ ನಂತರ, ವ್ಯವಸ್ಥಾಪಕ ನಿರ್ದೇಶಕರು ಬಸ್ ನಿಲ್ದಾಣದ ವಿವಿಧ ಭಾಗಗಳಾದ ಮುಂಗಡ ಟಿಕೆಟ್ ಕಾಯ್ದಿರಿಸುವ ಕೇಂದ್ರ, ವಾಣಿಜ್ಯ ಮಳಿಗೆಗಳು, ಒಪ್ಪಂದದ ವಾಹನ ನಿಲ್ದಾಣ ಹಾಗೂ ನಿಲ್ದಾಣದ ಸ್ವಚ್ಛತೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ಈ ಎಟಿಎಂ ಆರಂಭದಿಂದಾಗಿ ಬಸ್ ನಿಲ್ದಾಣದಲ್ಲಿ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರು ಹಾಗೂ ನೌಕರರಿಗೆ ಹಣ ಲಭ್ಯತೆಯ ಸಮಸ್ಯೆಗೆ ತೆರೆ ಎಳೆದಂತಾಗಿದೆ.



Post Comment