ಬೆಂಗಳೂರು, ಡಿಸೆಂಬರ್ 7, 2025: ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳ ಪೈಕಿ ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣದಲ್ಲಿ (ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಸಂಗ್ರಹ) ಅತ್ಯುತ್ತಮ ಸಾಧನೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಗೆ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಪ್ರಶಸ್ತಿ–2025 ಸತತ 11ನೇ ಬಾರಿ ಲಭಿಸಿದೆ.
ರಾಜಭವನ, ಬೆಂಗಳೂರಿನಲ್ಲಿ ಡಿಸೆಂಬರ್ 7ರಂದು ನಡೆದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಕೆಎಸ್‌ಆರ್‌ಟಿಸಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ಡಾ. ನಂದಿನಿದೇವಿ ಕೆ. (ಭಾ.ಆ.ಸೇ.) ಅವರಿಗೆ ಪ್ರದಾನ ಮಾಡಿದರು.

ಸಮಾರಂಭದಲ್ಲಿ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಕೆ.ವಿ. ಶರತ್ ಚಂದ್ರ (ಭಾ.ಪೊ.ಸೇ.), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರು (ಪ್ರ) ಫ್ಲೈಟ್ ಲೆಫ್ಟಿನೆಂಟ್ ಎಮ್.ಎಸ್. ಲೋಲಾಕ್ಷ (ನಿವೃತ್ತ) ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಸೈನಿಕರ ಕಲ್ಯಾಣಕ್ಕಾಗಿ ನಿರಂತರವಾಗಿ ಧ್ವಜ ನಿಧಿಗೆ ಬೆಂಬಲ ನೀಡಿ ಸಮಾಜಸೇವೆಯಲ್ಲಿ ತೊಡಗಿರುವ ಕೆಎಸ್‌ಆರ್‌ಟಿಸಿಯ ಸಾಧನೆಗೆ ಈ ಗೌರವ ಲಭಿಸಿದೆ.



Post Comment