ಬೆಂಗಳೂರು: ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಇಂದು ಅನುಕಂಪದ ಆಧಾರದ ಮೇಲೆ ನೇಮಕಾತಿ ಹುದ್ದೆ ನಿರೀಕ್ಷೆಯಲ್ಲಿದ್ದ 30 ಮೃತಾವಲಂಬಿತರಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ನೇಮಕಾತಿ ಪತ್ರಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಉಪಾಧ್ಯಕ್ಷ ರಿಜ್ವಾನ್ ನವಾಬ್, ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಭಾಆಸೇ, ನಿರ್ದೇಶಕಿ (ಸಿ & ಜಾ) ಡಾ. ನಂದಿನಿದೇವಿ ಕೆ. ಭಾಆಸೇ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಅನುಕಂಪದ ಆಧಾರದ ನೇಮಕಾತಿಯಿಂದ ಮೃತ ಉದ್ಯೋಗಿಗಳ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವುದು ಸರ್ಕಾರದ ಮಾನವೀಯ ನಿಲುವನ್ನು ಪ್ರತಿಬಿಂಬಿಸುತ್ತದೆ ಎಂದು ಸಚಿವರು ಹೇಳಿದರು.



Post Comment