×

ಸಾರಿಗೆ ಬಸ್ಸುಗಳು, ಬಸ್ ನಿಲ್ದಾಣಗಳಲ್ಲಿ ತಂಬಾಕು ಜಾಹೀರಾತುಗಳಿಗೆ ಸಂಪೂರ್ಣ ನಿಷೇಧ

ಬೆಂಗಳೂರು: ಸಾರ್ವಜನಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ನಾಲ್ಕು ನಿಗಮಗಳ ಸಾರಿಗೆ ಬಸ್ಸುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ಯಾವುದೇ ರೀತಿಯ ನೇರ ಅಥವಾ ಪರೋಕ್ಷ ಜಾಹೀರಾತುಗಳನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ.

ಈ ಆದೇಶದಂತೆ, ಇನ್ನು ಮುಂದೆ ಸಾರಿಗೆ ಸಂಸ್ಥೆಗಳ ಬಸ್ಸುಗಳು ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಪ್ರಚಾರಕ್ಕೆ ಅವಕಾಶ ಇರುವುದಿಲ್ಲ. ಈಗಾಗಲೇ ಅಳವಡಿಸಿರುವ ತಂಬಾಕು ಸಂಬಂಧಿತ ಜಾಹೀರಾತುಗಳನ್ನು ತೆರವುಗೊಳಿಸಲು ನಿರ್ದಿಷ್ಟ ಸಮಯಾವಕಾಶ ನಿಗದಿಪಡಿಸಲಾಗಿದ್ದು, ಆ ಅವಧಿಯೊಳಗೆ ಎಲ್ಲಾ ಜಾಹೀರಾತುಗಳನ್ನು ಕಡ್ಡಾಯವಾಗಿ ತೆಗೆದುಹಾಕುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸಾರ್ವಜನಿಕ ಆರೋಗ್ಯ ರಕ್ಷಣೆ ಹಾಗೂ ಯುವಜನರನ್ನು ತಂಬಾಕು ಸೇವನೆಯಿಂದ ದೂರವಿಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed