ಬೆಂಗಳೂರು: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ PM-AJAY ಯೋಜನೆಯಡಿ, ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಗೆ ಉಚಿತ ಭಾರೀ ವಾಹನ ಚಾಲನಾ ತರಬೇತಿ ಹಾಗೂ ಚಾಲನಾ ಪರವಾನಗಿ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಯೋಜನೆಯಡಿ ಮಾಲೂರು, ಮಳವಳ್ಳಿ, ಹಾಸನ, ಚಿಕ್ಕಮಗಳೂರು ಹಾಗೂ ಹೊಳಲ್ಕೆರೆಯಲ್ಲಿರುವ ತರಬೇತಿ ಕೇಂದ್ರಗಳಲ್ಲಿ ಭಾರೀ ವಾಹನ ಚಾಲನಾ ತರಬೇತಿ ಆಯೋಜಿಸಲಾಗಿದೆ. ತರಬೇತಿಯ ಅವಧಿ ಒಂದು ತಿಂಗಳು ಆಗಿದ್ದು, ತರಬೇತಿಗಾರರಿಗೆ ಉಚಿತ ವಸತಿ ಮತ್ತು ಊಟದ ಸೌಲಭ್ಯ ಕಲ್ಪಿಸಲಾಗಿದೆ.
ಸಾರಿಗೆ ಇಲಾಖೆ (RTO) ಸಹಯೋಗದಲ್ಲಿ ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಉಚಿತ ಚಾಲನಾ ಪರವಾನಗಿ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮ್ಮ ಹತ್ತಿರದ ತರಬೇತಿ ಕೇಂದ್ರಗಳಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅಥವಾ ksrtcjobs.karnataka.gov.in ವೆಬ್‌ಸೈಟ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂಬಂಧಿತ ಕಚೇರಿಯಿಂದ ಸಂಪರ್ಕಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನ ಸಂಪರ್ಕಿಸಬಹುದು:
ಮಳವಳ್ಳಿ – 7760990137
ಹಾಸನ – 7760990533
ಹೊಳಲ್ಕೆರೆ – 7019072560
ಮಾಲೂರು – 7760994432
ಚಿಕ್ಕಮಗಳೂರು – 9606037746
ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಈ ಸರ್ಕಾರಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಕೆಎಸ್.ಆರ್.ಟಿಸಿ ಪ್ರಕಟಣೆ ಮೂಲಕ ತಿಳಿಸಲಾಗಿದೆ.



Post Comment