ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ವು ಅಲ್ಪಸಂಖ್ಯಾತ ನಿರ್ದೇಶನಾಲಯದ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಕರಿಗೆ ಉಚಿತ ಲಘು ಹಾಗೂ ಭಾರಿ ವಾಹನ ಚಾಲನಾ ತರಬೇತಿ ನೀಡಲು ವಿಶೇಷ ಯೋಜನೆ ಪ್ರಕಟಿಸಿದೆ.
ಈ ಯೋಜನೆಯಡಿ ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟು 500 ಫಲಾನುಭವಿಗಳಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯೂ ಮಾಡಲಾಗಿದೆ. ತರಬೇತಿ ಪೂರ್ಣಗೊಂಡ ನಂತರ ಚಾಲನಾ ಪರವಾನಗಿ (ಲೈಸೆನ್ಸ್) ಪಡೆಯಲು ಸಹಾಯ ಮಾಡಲಾಗುತ್ತದೆ.

ಅರ್ಹತೆ:
ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳು
ವಯಸ್ಸು 18 ರಿಂದ 45 ವರ್ಷ
ಕನಿಷ್ಠ SSLC ಉತ್ತೀರ್ಣ
ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಶೈಕ್ಷಣಿಕ ದಾಖಲೆಗಳು ಇತ್ಯಾದಿ) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು: ksrctjobs.karnataka.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಕೊನೆಯ ದಿನಾಂಕ:
23-03-2026
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಟ್ಟದ ಸಂಪರ್ಕ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ.
ಅಲ್ಪಸಂಖ್ಯಾತ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಈ ಮಹತ್ವದ ಯೋಜನೆಯನ್ನು ಕೆಎಸ್‌ಆರ್‌ಟಿಸಿ ಜಾರಿಗೆ ತಂದಿದ್ದು, ಅರ್ಹ ಅಭ್ಯರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.



Post Comment