ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಈ ನಡುವೆ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷವು ಪತ್ರಕರ್ತೆ ಡಾ.ನಾಜಿಯಾ ಕೌಸರ್ ಅವರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಕಾಂಗ್ರೆಸ್ ವಲಯದಲ್ಲೂ ಹಾಗೂ ಮುಸ್ಲಿಂ ಸಮುದಾಯದಲ್ಲೂ ಹೆಚ್ಚುತ್ತಿದೆ ಎಂಬ ಮಾತು ಕೇಳಿಬರುತ್ತಿದೆ.
ಆದ್ದರಿಂದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಸಾಮಾಜಿಕ ಸಮತೋಲನ ಹಾಗೂ ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯವನ್ನು ಪರಿಗಣಿಸಿ ನಾಜಿಯಾ ಕೌಸರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಮತ್ತು ಮುಸ್ಲಿಂ ಸಮುದಾಯದ ಪ್ರತಿನಿಧಿಗಳು ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ, ಮುಸ್ಲಿಂ ಸಮುದಾಯಕ್ಕೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ನೀಡದೇ ಹೋದರೆ ಡಾ. ನಾಝಿಯಾ ಕೌಸರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯೂ ಇದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಇದರಿಂದ ಕಾಂಗ್ರೆಸ್ ಹೈಕಮಾಂಡ್ಗೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.



Post Comment