×

ಕೆಂಪೇಗೌಡ ಬಸ್ ನಿಲ್ದಾಣ ಟರ್ಮಿನಲ್-1 ಪಾರ್ಕಿಂಗ್ ಸಮಸ್ಯೆಗೆ ಪರಿಹಾರ

ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್-1 ರಲ್ಲಿ ದೀರ್ಘಕಾಲದಿಂದಲೂ ಕಂಡುಬರುತ್ತಿದ್ದ ಪಾರ್ಕಿಂಗ್ ಸಮಸ್ಯೆಗೆ ಇದೀಗ ಶಾಶ್ವತ ಪರಿಹಾರ ಕಂಡುಬಂದಿದೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಇಂದು ಪುನರ್ ಅಭಿವೃದ್ಧಿಪಡಿಸಿರುವ ಪಾರ್ಕಿಂಗ್ ಪ್ರದೇಶಕ್ಕೆ ಚಾಲನೆ ನೀಡಿದರು.

ಪ್ರಯಾಣಿಕರು ಹಾಗೂ ಸಿಬ್ಬಂದಿಗಳ ಸುಗಮ ಸಂಚಾರಕ್ಕಾಗಿ ರೂ. 3.29 ಕೋಟಿ ವೆಚ್ಚದಲ್ಲಿ ಸುಮಾರು ಎರಡೂವರೆ ಎಕರೆ ಪ್ರದೇಶವನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಲಾಗಿದೆ. ಈ ಹಿಂದೆ ಗುಂಡಿಗಳಿಂದ ಕೂಡಿದ ಈ ಪ್ರದೇಶದಲ್ಲಿ ಮಳೆಯಾಗುವಾಗ ನೀರು ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿತ್ತು.
ಸಚಿವರ ಗಮನಕ್ಕೆ ಬಂದ ಬಳಿಕ ಸ್ಥಳಕ್ಕೆ ಭೇಟಿ ನೀಡಿ ತುರ್ತಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಯನ್ನು ಯಶಸ್ವಿಯಾಗಿ ಮುಗಿಸಲಾಗಿದೆ.

ಹೊಸ ಪಾರ್ಕಿಂಗ್ ಪ್ರದೇಶದಲ್ಲಿ ಸುಮಾರು 100 ಬಸ್‌ಗಳನ್ನು ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, 11 ವಿದ್ಯುತ್ ದೀಪದ ಕಂಬಗಳು ಹಾಗೂ ವಿದ್ಯುತ್ ಪ್ಯಾನಲ್ ಕೊಠಡಿ ನಿರ್ಮಾಣ ಮಾಡಲಾಗಿದೆ.

ಈ ಪಾರ್ಕಿಂಗ್ ಸೌಲಭ್ಯವನ್ನು ವಾಯುವ್ಯ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಿಗೆ ಬಳಸಿಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಅಕ್ರಂ ಪಾಷ, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ಹಾಗೂ ನಿಗಮದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed