ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷರಾಗಿ ಮಧುರಾಜ್ ಸಿಎಂ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಈ ನೇಮಕಾತಿ ನಡೆಯಿದ್ದು, ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮಧುರಾಜ್ ಸಿಎಂ ಅವರು ರೈತರ ಸಮಸ್ಯೆಗಳ ಬಗ್ಗೆ ಸದಾ ಕಾಳಜಿ ವಹಿಸಿ, ಸಂಘಟನಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರ ನೇಮಕದಿಂದ ರೈತ ಮೋರ್ಚಾ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿವೆ ಎಂಬ ವಿಶ್ವಾಸವನ್ನು ಪಕ್ಷದ ನಾಯಕರು ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಧುರಾಜ್ ಸಿಎಂ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿವೈ ವಿಜಯೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಕೆಸಿ ರಾಮಮೂರ್ತಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಉಮೇಶ್ ಶೆಟ್ಟಿ, ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಅಶೋಕ್ ಮುತ್ಸಂದ್ರ ಹಾಗೂ ಮಂಡಳ ಅಧ್ಯಕ್ಷರಾದ ಶ್ರೀ ಮಂಜುನಾಥ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.
ಪಕ್ಷದ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ರೈತರ ಹಿತಕ್ಕಾಗಿ ಹೆಚ್ಚು ಶ್ರಮಿಸುವುದಾಗಿ ಹೇಳಿದ್ದಾರೆ.




Post Comment