×

ಹನೂರು -ಬೇಟೆಗಾರರಿಂದ 2 ಬ್ಯಾಗ್‌ ಜಿಂಕೆ ಮಾಂಸ ಜಪ್ತಿ?

ಚಾಮರಾಜನಗರ: ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಜಿಂಕೆ ಬೇಟೆಗಾರರು ಬಲಿಯಾಗಿರುವ ಪ್ರಕರಣದಲ್ಲಿ ಬೇಟೆ ಗಾರ ರಿಂದ 2 ಬ್ಯಾಗ್‌ 34.25 ಜಿಂಕೆ ಮಾಂಸ
ವನ್ನು ಜಪ್ತಿ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿದೆ.

ನಾಲ್ವರು ಬೇಟೆಗಾರರು ನಾಡಬಂದೂಕು ಹಿಡಿದು ಇಡೀ ರಾತ್ರಿ ಪ್ರಾಣಿಗಳನ್ನು ಬೇಟೆಯಾಡಿ, ಜಿಂಕೆ ಮಾಂಸವನ್ನು ಸಾಗಿಸುತ್ತಿದ್ದರು ಎಂಬ ಸುಳಿವು ಸಿಕ್ಕಿತ್ತು. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿಯು ಮೂವರನ್ನು ತಡೆದಿದ್ದರು. ಈ ವೇಳೆ ಬೇಟೆಗಾರರ ಬಳಿ 2 ಪರವಾನಗಿ ಇಲ್ಲದ ನಾಡಬಂದೂಕು ಇತ್ತು. ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಬೇಟೆಗಾರರು ದಾಳಿಗೆ ಯತ್ನಿಸಿದ್ದಾರೆ. ಈ ಹಂತದಲ್ಲಿ ಎರಡೂ ಕಡೆಯ ನಡುವೆ ಫೈರಿಂಗ್‌ ನಡೆದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಸಿದ್ದಾರೆ.

ಸರ್ಕಾರವು ಪ್ರಕರಣದ ಬಗ್ಗೆ ಮ್ಯಾಜಿಸ್ಟ್ರೇಟ್‌ ತನಿಖೆ ಮಾಡುತ್ತೇವೆ. ತನಿಖೆ ನಡೆದ ಬಳಿಕ ಸತ್ಯಾಂಶ ಹೊರಗೆ ಬರಲಿದೆ. ಅರಣ್ಯ ಅಧಿಕಾರಿಗಳ ತಪ್ಪಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ತನಿಖೆಗೆ ಮುಂಚೆ ಯಾರ ಹೇಳಿಕೆಯನ್ನೂ ಗಣನೆಗೆ ತೆಗೆದುಕೊಳ್ಳುವಂತಿಲ್ಲ. ಉದ್ದೇಶಪೂರ್ವಕ ವಾಗಿ ಎನ್‌ಕೌಂಟರ್‌ ಮಾಡಿಸಲಾಗಿದೆಯೇ ಎಂಬುದರ ಬಗ್ಗೆಯೂ ತನಿಖೆ ಮಾಡಲಾಗುವುದು ಎಂದು ತಿಳಿಸಿದೆ. ಇನ್ನು ಮರಣೋತ್ತರ ಪರೀಕ್ಷೆ ವೇಳೆ ಈ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ತಿಳಿದು ಬಂದಿದೆ.

ನಾಡ ಬಂದೂಕುಧಾರಿಗಳು ಯಾವುದೇ ಬಂದೂಕಿಗೆ ಲೈಸೆನ್ಸ್ ಇಲ್ಲ. ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿದ್ದಾರೆ. ನಾಲ್ಕು ಬ್ಯಾಗ್ ಜಿಂಕೆ ಮಾಂಸ ವಶಕ್ಕೆ ಪಡೆದಿದ್ದಾರೆ. ನಮ್ಮ ಅಧಿಕಾರಿಗಳು ಗಸ್ತು ಹೋಗುವಾಗ ಗೊತ್ತಾಗಿದೆ. ಬೆಳಗ್ಗೆ 5 ಗಂಟೆಗೆ ಆಗಿರುವ ಘಟನೆ ಎಂದು ಸಚಿವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದರು.

ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಈಗಾಗಲೇ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರಕರಣದ ಕುರಿತು ಸಂಪೂರ್ಣ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed