Friday 11-09-2026

ವಿಕಸಿತ ಭಾರತ ಗುರಿ ಸಾಧನೆಗೆ ಎಲೆಕ್ಟ್ರಿಕ್‌ ವಾಹನ ಉದ್ಯಮ ಬಹುದೊಡ್ಡ ಕೊಡುಗೆ ನೀಡಲಿದೆ : ಹೆಚ್ಡಿಕೆ

Posted By: Owner
  • Updated Wednesday Sep 09 2026
  • / 8 Read

ವಿಕಸಿತ ಭಾರತ ಗುರಿ ಸಾಧನೆಗೆ ಎಲೆಕ್ಟ್ರಿಕ್‌ ವಾಹನ ಉದ್ಯಮ ಬಹುದೊಡ್ಡ ಕೊಡುಗೆ ನೀಡಲಿದೆ : ಹೆಚ್ಡಿಕೆ

ಈ ಕುರಿತು ತಮ್ಮ 'ಎಕ್ಸ್‌' ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜಾಗತಿಕ ಮಟ್ಟದ ಪೈಪೋಟಿಯಲ್ಲಿ ಭಾರತ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ದೇಶದ ರಸ್ತೆಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ.

ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್‌ ವಾಹನ ವಲಯದ ಗಮನಾರ್ಹ ಬೆಳವಣಿಗೆಯನ್ನು ಪ್ರಸ್ತಾಪಿಸಿರುವ ಅವರು, ಪ್ರಧಾನಿ ಮೋದಿ ಅವರ ನಾಯಕತ್ವ ಹಾಗೂ ದೂರದೃಷ್ಟಿಯಿಂದ ಆಗಿರುವ ಪರಿವರ್ತನಾತ್ಮಕ ಬದಲಾವಣೆಗಳು ದೇಶದ ಇವಿ ಕ್ಷೇತ್ರಕ್ಕೆ ವಿಶೇಷ ಶಕ್ತಿ ತುಂಬಿವೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ 1.01 ಕೋಟಿಗೂ ಹೆಚ್ಚು ಎಲೆಕ್ಟ್ರಿಕ್‌ ವಾಹನಗಳು ಮಾರಾಟವಾಗಿದ್ದು, ರಸ್ತೆಗಳಲ್ಲಿ ಇವುಗಳ ಸಂಚಾರ ವೇಗ ಪಡೆದುಕೊಳ್ಳುತ್ತಿದೆ. ಬೃಹತ್‌ ಕೈಗಾರಿಕೆಗಳ ಸಚಿವಾಲಯವು ಪಿಎಂ ಇ-ಡ್ರೈವ್‌ ಸೇರಿದಂತೆ ವಿವಿಧ ಉಪಕ್ರಮಗಳ ಮೂಲಕ ಈ ಪರಿವರ್ತನೆಗೆ ಉತ್ತೇಜನ ನೀಡುತ್ತಿದೆ ಎಂದು ಹೇಳಿದ್ದಾರೆ.

ಪಿಎಂ ಇ-ಡ್ರೈವ್‌ ಯೋಜನೆಯಡಿ ಈಗಾಗಲೇ 25.88 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳು ಹಾಗೂ 2.75 ಲಕ್ಷ ಎಲೆಕ್ಟ್ರಿಕ್‌ ತ್ರಿಚಕ್ರ ವಾಹನಗಳು ಸೇರಿದಂತೆ ಒಟ್ಟು 28.63 ಲಕ್ಷ ಎಲೆಕ್ಟ್ರಿಕ್‌ ವಾಹನಗಳ ನಿಯೋಜನೆಗೆ ಬೆಂಬಲ ನೀಡಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರು, ಸೆ.9- ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣದ ಗುರಿ ಸಾಧಿಸುವಲ್ಲಿ ಎಲೆಕ್ಟ್ರಿಕ್‌ ವಾಹನ ಉದ್ಯಮ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Tags :

Share News


For Add News Review. You Need To Login First Login Page